ನವದೆಹಲಿ:
ಬಿಸಿಸಿಐ ಇಂದು ಟೀಮ್ ಇಂಡಿಯಾದ ಆಟಗಾರರ ವಾರ್ಷಿಕ ಗುತ್ತಿಗೆ ಪಟ್ಟಿಯನ್ನು ಪ್ರಕಟಿಸಿದೆ.ಈ ವಾರ್ಷಿಕ ಆಟಗಾರರ ಒಪ್ಪಂದಗಳು ಅಕ್ಟೋಬರ್ 1, 2024 ರಿಂದ ಸೆಪ್ಟೆಂಬರ್ 30, 2025 ರವರೆಗೆ ಅನ್ವಯಿಸುತ್ತವೆ. ಬಿಸಿಸಿಐ ಮಾನದಂಡದ ಅನ್ವಯ ವಾರ್ಷಿಕ ಗುತ್ತಿಗೆಯಲ್ಲಿ ಯಾರಿಗೆ ಯಾವ ಗ್ರೇಡ್ನಲ್ಲಿ ಸ್ಥಾನ ಸಿಕ್ಕಿದೆ ಎಂಬುದನ್ನು ತಿಳಿಸಲಾಗಿದೆ,
ಗ್ರೇಡ್ A+ನಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ ಸ್ಥಾನ ಪಡೆದಿದ್ದಾರೆ, ಗ್ರೇಡ್Aನಲ್ಲಿ ಎಂಡಿ ಸಿರಾಜ್, ಕೆಎಲ್ ರಾಹುಲ್, ಶುಭಮನ್ ಗಿಲ್, ಹಾರ್ದಿಕ್ ಪಾಂಡ್ಯ, ಎಂಡಿ ಶಮಿ ಮತ್ತು ರಿಷಭ್ ಪಂತ್ ಸ್ಥಾನ ಪಡೆದಿದ್ದು, ಗ್ರೇಡ್ Bನಲ್ಲಿ ಸೂರ್ಯಕುಮಾರ್ ಯಾದವ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಯಶಸ್ವಿ ಜೈಸ್ವಾಲ್ ಮತ್ತು ಶ್ರೇಯಸ್ ಅಯ್ಯರ್ ಸ್ಥಾನ ಪಡೆದಿದ್ದು, ಗ್ರೇಡ್ Cನಲ್ಲಿ ರಿಂಕು ಸಿಂಗ್, ತಿಲಕ್ ವರ್ಮಾ, ಋತುರಾಜ್ ಗಾಯಕ್ವಾಡ್, ಶಿವಂ ದುಬೆ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಮುಖೇಶ್ ಕುಮಾರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ರಜತ್ ಪಾಟಿದಾರ್, ಧ್ರುವ್ ಜುರೆಲ್, ಸರ್ಫರಾಜ್ ಖಾನ್, ನಿತೀಶ್ ಕುಮಾರ್ ರೆಡ್ಡಿ, ಇಶಾನ್ ಕಿಶನ್, ಅಭಿಷೇಕ್ ಶರ್ಮಾ, ಆಕಾಶ್ ದೀಪ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ ಸ್ಥಾನ ಪಡೆದಿದ್ದಾರೆ.
