ಜನೌಷಧಿ ಮಳಿಗೆ’ಗಳನ್ನು ತೆರೆಯಲು ಅರ್ಜಿ ಆಹ್ವಾನ

ಬೆಂಗಳೂರು:

        ನಗರದ ಪಶ್ಚಿಮ ವಲಯದ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜನೌಷಧಿ ಮಳಿಗೆಗಳನ್ನು  ಪ್ರಾರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ.

ಈ ಸಂಬಂಧ ಬಿಬಿಎಂಪಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ  ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ 5 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಾದ ಪ್ಯಾಲೇಸ್ ಗುಟ್ಟಹಳ್ಳಿ, ನೇತಾಜಿ ಸರ್ಕಲ್, ಸುಬೇದಾರ್‌ಪಾಳ್ಯ,

ಗಾಂಧಿಗ್ರಾಮ ಮತ್ತು ನಾಗಪ್ಪಬ್ಲಾಕ್ ಆಸ್ಪತ್ರೆಗಳಲ್ಲಿ ಸಾಮಾನ್ಯ ಬಡ ಜನರಿಗೆ ಉತ್ತಮ ಗುಣಮಟ್ಟದ ಜೆನೆರಿಕ್ ಔಷಧಿಗಳನ್ನು ಕಡಿಮೆ ಕೈಗೆಟಕುವ ದರದಲ್ಲಿ ಕೇಂದ್ರ ಸರ್ಕಾರದ ಜನೌಷಧಿ ಕಾರ್ಯಕ್ರಮದಡಿ ಜನೌಷಧಿ ಮಳಿಗೆಗಳ ಮೂಲಕ ಸಾರ್ವಜನಿಕರಿಗೆ ತಲುಪಿಸುವ ಉದ್ದೇಶದಿಂದ, ಜನೌಷಧಿ ಮಳಿಗೆಗಳನ್ನು ಪ್ರಾರಂಭಿಸಲು ಅರ್ಹ ಸರ್ಕಾರೇತರ ಸಂಸ್ಥೆಗಳು, ದತ್ತಿ ಸಂಸ್ಥೆಗಳು, ನಿರುದ್ಯೋಗಿ ಯುವಕರು, ಹಾಗೂ ಪದವಿ ಫಾರ್ಮಸಿಸ್ಟ್ರವರು ಈ ಕೆಳಕಂಡ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ತಿಳಿಸಿದೆ.

ಜನೌಷಧಿ ಮಳಿ ತೆರೆಯಲು ಸಲ್ಲಿಸಬೇಕಾದ ದಾಖಲೆಗಳು

1. ಸರ್ಕಾರೇತರ ಸಂಸ್ಥೆಗಳು, ದತ್ತಿ ಸಂಸ್ಥೆಗಳು:

ಎ.ಸದರಿ ಸಂಸ್ಥೆಯ ನೋಂದಣಿ ಪತ್ರ ಮತ್ತು ಸದರಿ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪತ್ರ.

ಬಿ. ಫಾರ್ಮಸಿಸ್ಟ್ ಗಳ ಫಾರ್ಮಸಿ ಪತ್ರ.

ಸಿ. ಆಧಾರ್ ಮತ್ತು ಪ್ಯಾನ್ ಕಾರ್ಡ್

ಡಿ. ಅರ್ಜಿ ಸಲ್ಲಿಸುತ್ತಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಹೆಸರು.

2. ಪದವಿ ಫಾರ್ಮಸಿಸ್ಟ್ರವರು ಮತ್ತು ನಿರುದ್ಯೋಗಿ ಯುವಕರು:

ಎ. ಫಾರ್ಮಸಿಸ್ಟ್ ಗಳ ಫಾರ್ಮಸಿ ಪತ್ರ.

ಬಿ. ಆಧಾರ್ ಮತ್ತು ಪ್ಯಾನ್ ಕಾರ್ಡ್.

ಸಿ. ಅರ್ಜಿ ಸಲ್ಲಿಸುತ್ತಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಹೆಸರು

ಈ ಮೇಲ್ಕಂಡ ದಾಖಲೆಗಳೊಂದಿಗೆ ಅರ್ಜಿಯನ್ನು ಮುಖ್ಯ ಆರೋಗ್ಯಾಧಿಕಾರಿ(ಸಾರ್ವಜನಿಕ ಆರೋಗ್ಯ) ರವರ ಕಛೇರಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಎನ್.ಆರ್.ಚೌಕ, ಬೆಂಗಳೂರು-560 002 ಈ ವಿಳಾಸಕ್ಕೆ ಸಲ್ಲಿಸಲು ತಿಳಿಸಿದೆ.

ಅಂದಹಾಗೇ, ಅರ್ಜಿ ಸಲ್ಲಿಸುವ ನಿಗಧಿಪಡಿಸುವ ದಿನಾಂಕ ಮತ್ತು ಸಮಯ: ದಿನಾಂಕ: 25-12-2021 ರಿಂದ 27-12-2021 ರವರೆಗೆ ಸಮಯ ಬೆಳಗ್ಗೆ 10.30 ರಿಂದ ಸಂಜೆ 5.30 ರವರೆಗೆ ಆಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link