ಅರಣ್ಯ ಭೂಮಿ ಒತ್ತುವರಿ ತೆರವಿಗೆ ಈಶ್ವರ ಖಂಡ್ರೆ ಆದೇಶ

ಬೆಂಗಳೂರು

     ಬೆಂಗಳೂರು ಪೂರ್ವ ತಾಲೂಕು ಕೆ.ಆರ್.ಪುರ ಹೋಬಳಿ ಕೊತ್ತನೂರಿನ ಸರ್ವೆ ನಂ.48ರಲ್ಲಿ ಸುಮಾರು 700 ಕೋಟಿ ರೂ. ಮೌಲ್ಯದ 9 ಎಕರೆ ಅರಣ್ಯ ಭೂಮಿ  ಒತ್ತುವರಿಯನ್ನು ತೆರವುಗೊಳಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಇಲಾಖೆ ಅಧಿಕಾರಿಗಳಿಗೆ ಸೂಚನೆ

     ಬೆಂಗಳೂರು ನಗರದಲ್ಲಿ ಹಸಿರು ಹೊದಿಕೆ ಹೆಚ್ಚಿಸಲು 1999-2000 ಸಾಲಿನಲ್ಲಿ ಕೊತ್ತನೂರು ಸರ್ವೆ ನಂ.48ರಲ್ಲಿ 22.08 ಎಕರೆ ಜಮೀನಿನಲ್ಲಿ ನೆಡುತೋಪು ಅಭಿವೃದ್ಧಿಪಡಿಸುವ ಸಲುವಾಗಿ ಈ ಭೂಮಿಯನ್ನು ಅರಣ್ಯ ಇಲಾಖೆಗೆ ನೀಡಲಾಗಿದೆ.

     ಆದರೆ ಈ ಜಮೀನು ವಶಕ್ಕೆ ಪಡೆದು ಅರಣ್ಯ ಬೆಳೆಸುವಲ್ಲಿ ಹಿಂದಿನ ಅಧಿಕಾರಿಗಳ ವಿಫಲರಾಗಿದ್ದರು. 22.08 ಎಕರೆ ಭೂಮಿಯ ಪೈಕಿ 13 ಎಕರೆ ಜಮೀನನ್ನು ಅರಣ್ಯ ಇಲಾಖೆಗೆ ವಹಿಸಲಾಗಿದೆ ಎಂದು ಅಂದಿನ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಆರ್​ಹೆಚ್​ಎಸ್​ (2) 44/82-83 ಡಿಟಿ​ 25.01.2000ರ ಆದೇಶದಂತೆ ಪಹಣಿ (ಆರ್.ಟಿ.ಸಿ.) ಯಲ್ಲಿ ನಮೂದಾಗಿದೆ.

     ಈ ಜಮೀನಿನ ನಕ್ಷೆ ಪಡೆದು ಉಳಿದ 9 ಎಕರೆಯ ದಾಖಲೆಗಳನ್ನೂ ಮಾಡಿಸಿ, ಸುಮಾರು 700 ಕೋಟಿ ರೂ. ಬೆಲೆ ಬಾಳುವ ಜಮೀನು ಒತ್ತುವರಿಯಾಗಿದ್ದರೆ ಕ್ರಮವಹಿಸಿ. ಜಮೀನನ್ನ ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು 64(ಎ) ಪ್ರಕ್ರಿಯೆ ಆರಂಭಿಸಲು ಅಧಿಕಾರಿಗಳಿಗೆ ಖಂಡ್ರೆ ಸೂಚನೆ ನೀಡಿದ್ದಾರೆ.

     ಅರಣ್ಯ ಇಲಾಖೆಗೆ ಮಂಜೂರಾಗಿದ್ದ ಈ ಭೂಮಿಯನ್ನು ವಶಕ್ಕೆ ಪಡೆಯದೇ ಅಂದಿನ ಉಪ ವಿಭಾಗಾಧಿಕಾರಿಯಾಗಿದ್ದ ಎಂ.ಜಿ. ಶಿವಣ್ಣ ಮತ್ತು ತಹಶೀಲ್ದಾರ್ ಅಜಿತ್ ರೈ ಏಕಪಕ್ಷೀಯವಾಗಿ ‘ಸರ್ಕಾರಿ ಭೂಮಿ’ ಎಂದು ಬದಲಾಯಿಸಿದ್ದಾರೆ. ಅರಣ್ಯ ಭೂಮಿ ಒತ್ತುವರಿ ಮಾಡಿದ್ದವರಿಗೆ ಅನುಕೂಲ ಮಾಡಿಕೊಡುವ ಪ್ರಯತ್ನ ಮಾಡಿದ್ದಾರೆ. ಹೀಗಾಗಿ ಅಸಿಸ್ಟೆಂಟ್ ಕಮಿಷನರ್ ಮತ್ತು ತಹಶೀಲ್ದಾರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸೂಚನೆ ನೀಡಿದ್ದಾರೆ.

    ಸಚಿವರ ಸೂಚನೆ ಮೇರೆಗೆ ಇಬ್ಬರು ಹಿರಿಯ ಕೆಎಎಸ್ ಅಧಿಕಾರಿಗಳ ವಿರುದ್ಧ ಅರಣ್ಯ ಸಂರಕ್ಷಣಾ ಕಾಯ್ದೆ 1980ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Recent Articles

spot_img

Related Stories

Share via
Copy link
Powered by Social Snap