ನವದೆಹಲಿ:
ಮದ್ಯ ನೀತಿ ಹಗರಣದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡುವ ಕೆಳ ನ್ಯಾಯಾಲಯದ ಮಧ್ಯಂತರ ತಡೆಯಾಜ್ಞೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ಎತ್ತಿಹಿಡಿದಿದೆ.
ದೆಹಲಿ ಹೈಕೋರ್ಟ್ನಲ್ಲಿ ಅರವಿಂದ್ ಕೇಜ್ರಿವಾಲ್ಗೆ ಹಿನ್ನಡೆಯಾಗಿದೆ. ಜಾಮೀನು ಅರ್ಜಿ ವಿಚಾರವಾಗಿ ರೋಸ್ ಅವೆನ್ಯೂ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿತ್ತು. ಇಡಿ ತಡೆಯಾಜ್ಞೆಗೆ ಹೈಕೋರ್ಟ್ ಮನ್ನಣೆ ಲಭಿಸಿದೆ.
ನಾಳೆ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಕೇಜ್ರಿವಾಲ್ಗೆ ಭಾರೀ ಹಿನ್ನಡೆಯಾಗಿರುವ ಹಿನ್ನೆಲೆ ಅವರು ತಿಹಾರ್ ಜೈಲಿನಲ್ಲೇ ಉಳಿಯಲಿದ್ದಾರೆ.