ಬಂಧನ ಪ್ರಶ್ನಿಸಿ ಅರವಿಂದ್‌ ಕೇಜ್ರಿವಾಲ್‌ ಅರ್ಜಿ ….!

ನವದೆಹಲಿ:

    ಅಬಕಾರಿ ನೀತಿ ‘ಹಗರಣ’ಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ತಮ್ಮ ಬಂಧನವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಈ ಸಂಬಂಧ ಮಂಗಳವಾರ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಗೆ ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳೊಳಗೆ ಉತ್ತರ ನೀಡುವಂತೆ ಸೂಚಿಸಿದ್ದಾರೆ.

   ಯಾವುದಾದರೂ ಮರುಪರಿಶೀಲನೆ ಇದ್ದರೆ ಎರಡು ದಿನಗಳಲ್ಲಿ ಮನವಿ ಸಲ್ಲಿಸಬಹುದು ಎಂದು ಹೈಕೋರ್ಟ್, ಕೇಜ್ರಿವಾಲ್ ಅವರ ವಕೀಲರು ಹೇಳಿ, ವಿಚಾರಣೆಯನ್ನು ಜುಲೈ 17ಕ್ಕೆ ಮುಂದೂಡಿದೆ.ಎಎಪಿ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಅವರು, ವಿಚಾರಣಾ ನ್ಯಾಯಾಲಯದ ಜೂನ್ 26 ಸಿಬಿಐ ಕಸ್ಟಡಿಗೆ ಮತ್ತು ಜುಲೈ 12 ರವರೆಗೆ ನ್ಯಾಯಾಂಗ ಬಂಧನದ ಆದೇಶಗಳನ್ನು ಪ್ರಶ್ನಿಸಿದ್ದಾರೆ.

   55 ವರ್ಷದ ಕೇಜ್ರಿವಾಲ್ ಅವರನ್ನು ಜೂನ್ 26 ರಂದು ತಿಹಾರ್ ಜೈಲಿನಿಂದ ಸಿಬಿಐ ಬಂಧಿಸಿತು. ಅಲ್ಲಿ ಅವರು ಜಾರಿ ನಿರ್ದೇಶನಾಲಯ(ಇಡಿ) ದಾಖಲಿಸಿದ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap