JDS- bjp ಮೈತ್ರಿ : ಬೆಜೆಪಿಗೆ ಮುಖಭಂಗ : ಅರವಿಂದ ನಿಂಬಾವಳಿ ……!

ವಿಜಯಪುರ: 

    ಜೆಡಿಎಸ್‌ನ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ವಿಚಾರವಾಗಿ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಗೆ ಮುಖಭಂಗವಾಗಿದೆ ಎಂದು ಬಿಜೆಪಿಯ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.

     ಮಾಧ್ಯಮಗಳ ಮುಂದೆ ಮಾತನಾಡಿದ ಅರವಿಂದ್ ನಿಂಬಾವಲಿ ಅವರು, ಈ ವಿಷಯ ಖಂಡಿತವಾಗಿಯೂ ಪಕ್ಷಕ್ಕೆ ಮುಜುಗರ ಉಂಟುಮಾಡಿದೆ ಎಂಬುದನ್ನು ನಾವು ಒಪ್ಪಿಕೊಂಡಿದ್ದೇವೆ. ಆದರೆ ಬಿಜೆಪಿ ಆರೋಪಿಯನ್ನು ಬೆಂಬಲಿಸುವುದಿಲ್ಲ ಅಥವಾ ಅವರ ಜೊತೆ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸುತ್ತೇನೆ. ಇನ್ನು ಕಾನೂನಿನ ಪ್ರಕಾರ ಕಠಿಣ ಕ್ರಮಕ್ಕೆ ಆಗ್ರಹಿಸುತ್ತೇವೆ. ತನಿಖೆಯಲ್ಲಿ ಪಕ್ಷ ಯಾವುದೇ ಅಡೆತಡೆ ಸೃಷ್ಟಿಸುವುದಿಲ್ಲ ಎಂದರು.

    ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಕಾಂಗ್ರೆಸ್ ಈ ವಿಷಯವನ್ನು ರಾಜಕೀಯಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಲಿಂಬಾವಳಿ ಆರೋಪಿಸಿದರು. ಆದರೆ ದೇಶದಲ್ಲಿ ತೀವ್ರ ಚರ್ಚೆಗೆ ಕಾರಣವಾದ ಘಟನೆಯ ನಂತರ ಬಿಜೆಪಿ ಜೆಡಿಎಸ್ ಜೊತೆಗಿನ ಸಂಬಂಧವನ್ನು ಕಡಿದುಕೊಳ್ಳಲು ಹೊರಟಿದೆಯೇ ಎಂಬ ಪ್ರಶ್ನೆಗೆ ಲಿಂಬಾವಳಿ ಉತ್ತರಿಸಲು ನಿರಾಕರಿಸಿದರು. 

    ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಯುವ ಭರವಸೆಗಳನ್ನು ಮೋದಿ ಸರ್ಕಾರ ಈಡೇರಿಸಿಲ್ಲ ಎಂಬ ಕಾಂಗ್ರೆಸ್ ಆರೋಪಕ್ಕೆ ಉತ್ತರಿಸಿದ ಲಿಂಬಾವಳಿ, ಈ ಆರೋಪ ನಿರಾಧಾರ ಎಂದು ಹೇಳಿದ್ದಾರೆ. ಉದ್ಯೋಗ ಎಂದರೆ ಸರ್ಕಾರಿ ಕೆಲಸ ಮಾತ್ರ ಅಲ್ಲ. ಕೇಂದ್ರವು ಜಲ ಜೀವನ್ ಮಿಷನ್ ಅಡಿಯಲ್ಲಿ ಹೆದ್ದಾರಿಗಳ ಅಭಿವೃದ್ಧಿ ಮತ್ತು ಪೈಪ್‌ಲೈನ್‌ಗಳನ್ನು ಹಾಕುವಂತಹ ಕಾಮಗಾರಿಗಳನ್ನು ಪ್ರಾರಂಭಿಸಿದೆ. ಈ ಯೋಜನೆಗಳು ದೇಶದಲ್ಲಿ ಸಾಕಷ್ಟು ಉದ್ಯೋಗಗಳನ್ನು ಸೃಷ್ಟಿಸಿವೆ. ಇದನ್ನು ಉದ್ಯೋಗ ಎಂದು ಪರಿಗಣಿಸಬೇಕು. ಕೇವಲ ಸರ್ಕಾರಿ ಉದ್ಯೋಗಗಳು ಉದ್ಯೋಗವಲ್ಲ ಎಂದು ಸಮರ್ಥಿಸಿಕೊಂಡರು.

Recent Articles

spot_img

Related Stories

Share via
Copy link