ಮೈಸೂರು:

ಹಿಜಾಬ್ ವಿವಾದ ಆಗಲು ಬಿಜೆಪಿಯೇ ಕಾರಣ. ಮುಸ್ಲಿಂ ಹೆಣ್ಣು ಮಕ್ಕಳು ದುಪ್ಪಟ್ಟವನ್ನ ತಲೆಗೆ ಹಾಕಿ ಕೊಳ್ಳುತ್ತೇನೆ ಅಂದ್ರೆ ಅದರಲ್ಲಿ ತಪ್ಪೇನಿದೆ? ಹಿಂದೂ ಹೆಣ್ಣು ಮಕ್ಕಳು ತಲೆ ಮೇಲೆ ಬಟ್ಟೆ ಹಾಕಿ ಕೊಳ್ಳಲ್ವಾ? ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಹಾಕುತ್ತಾರೆ.ಅದನ್ನು ನೀವು ಪ್ರಶ್ನಿಸ್ತೀರಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಭ್ರಷ್ಟಾಚಾರದ ದಾಳಿಗಳು ಮತ್ತು ಭಗತ್ ಸಿಂಗ್, ರಾಜಗುರು, ಸುಖದೇವ್ ಬಲಿದಾನ….
ಸಿದ್ದರಾಮನ ಹುಂಡಿಯಲ್ಲಿ ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಸಿದ್ದರಾಮಯ್ಯ, ಇಂತಹ ವಿವಾದ ಸೃಷ್ಟಿಸಿ ಅರಗಿಸಿ ಕೊಳ್ಳುತ್ತೇವೆ ಎಂದು ಬಿಜೆಪಿ ಅಂದುಕೊಂಡಿದೆ. ಆದರೆ, ಜನ ಬುದ್ಧಿವಂತರು. ಜನರಿಗೆ ಬಿಜೆಪಿಯ ತಂತ್ರ ಅರ್ಥವಾಗಿದೆ. ಸಂಘ ಪರಿವಾರದವರು ಅಲ್ಪಸಂಖ್ಯಾತರ ಕೊಲೆ ಮಾಡಿದರೆ ಮೃತರ ಕುಟುಂಬಕ್ಕೆ ಕಡಿಮೆ ಪರಿಹಾರ ಹಣ ಕೊಡುತ್ತಾರೆ. ಮುಸಲ್ಮಾನರು ಹಿಂದೂವಿನ ಕೊಲೆ ಮಾಡಿದರೆ ಮೃತರ ಕುಟುಂಬಕ್ಕೆ ಜಾಸ್ತಿ ಪರಿಹಾರ ಕೊಡುತ್ತಾರೆ.
ಪಠ್ಯಪುಸ್ತಕದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣಕ್ಕೆ ಬ್ರೇಕ್..!ಶಿಕ್ಷಣ ಸಚಿವರು ಹೇಳಿದ್ದೇನು..?
ಶಿವಮೊಗ್ಗದ ಹರ್ಷನ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಕೊಡ್ತಾರೆ. ಅದೇ ಕರಾವಳಿಯ ದಿನೇಶ್ ಕುಟುಂಬಕ್ಕೆ ಕೊಟ್ರಾ? ದುಡ್ಡು ಅಂದ್ರೆ ಇವರ ಅಪ್ಪನ ಮನೆಯದ್ದಾ? ಸಾರ್ವಜನಿಕರು ಬೆವರು ಸುರಿಸಿ ದುಡಿದು ಕಟ್ಟಿದ ತೆರಿಗೆ. ಇವರು ಯಾವಾಗಲೂ ಜನರಿಗೆ ಮಕ್ಮಲ್ ಟೋಪಿ ಹಾಕಬಹುದು ಅಂದುಕೊಂಡಿದ್ದಾರೆ. ಜನರಿಗೆ ಸತ್ಯ ಗೊತ್ತಾಗುತ್ತದೆ. ಇಂತಹ ವರ್ತನೆಯಿಂದ ಮತ ಕ್ರೂಢೀಕರಣ ಆಗುತ್ತೆ ಎಂಬ ಬಿಜೆಪಿ ಲೆಕ್ಕ ಉಲ್ಟಾ ಆಗುತ್ತೆ ನೋಡಿ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








