ಬೆಂಗಳೂರು:
ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.
ರಾಜ್ಯಾದ್ಯಂತ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ವ್ಯಾಪಕವಾಗಿ ಹರಡುತ್ತಿವೆ. ಅರ್ಜುನ್ ಜನ್ಯ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅರ್ಜುನ್, ಕಳೆದ ವಾರ ನನಗೆ ಶೀತ ಕಾಣಿಸಿಕೊಂಡಿತ್ತು. ಶನಿವಾರ ಕೋವಿಡ್ ಪರೀಕ್ಷೆ ಮಾಡಿಸಿದೆ. ನಂತರ ಸೋಂಕು ತಗುಲಿರುವುದು ಗೊತ್ತಾಯಿತು. ಮುಂಜಾಗ್ರತೆ ದೃಷ್ಟಿಯಿಂದ ನಾನೀನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನನಗೆ ಸೋಂಕು ಹೇಗೆ, ಯಾವಾಗ ತಗುಲಿತು ಎಂಬ ಬಗ್ಗೆ ಅರಿವಿಲ್ಲ. ಸುರಕ್ಷತಾ ಕ್ರಮಗಳನ್ನು ಪಾಲಿಸುತ್ತಿದ್ದೇನೆ. ಶೀಘ್ರವೇ ಗುಣಮುಖನಾಗಿ ಬರುತ್ತೇನೆಂದು ವಿಶ್ವಾಸವಿದೆʼ ಎಂದು ಜನ್ಯ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ