ಆರೋಗ್ಯ ಕರ್ನಾಟಕ ಪರಿಷ್ಕೃತ ಕಾರ್ಡ್ ವಿತರಣೆಗೆ ಚಾಲನೆ….!

ಬೆಳಗಾವಿ:

    ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ   ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯ ಪರಿಷ್ಕೃತ ಕಾರ್ಡ್ ವಿತರಣೆಗೆ ಚಾಲನೆ ನೀಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಮತ್ತು ಆಯುಕ್ತ ರಂದೀಪ್ ಮೊದಲಾದವರು ಉಪಸ್ಥಿತರಿದ್ದರು. 

    ನಂತರ ಮಾತನಾಡಿದ ಮುಖ್ಯಮಂತ್ರಿ, ಈ ಯೋಜನೆಯಲ್ಲಿ ರಾಜ್ಯ ಸರ್ಕಾರದ ಕೊಡುಗೆ ಶೇ. 64 ರಿಂದ ಶೇ. 70 ರಷ್ಟಿದೆ. ಕೇಂದ್ರದಿಂದ ಶೇಕಡಾ 30 ರಿಂದ 36 ರಷ್ಟು ಫಲಾನುಭವಿಗಳಿಗೆ ಆರ್ಥಿಕ ನೆರವು ದೊರೆಯಲಿದೆ. ಬಿ.ಪಿ.ಎಲ್. ಪಡಿತರ ಚೀಟಿದಾರರಿಗೆ  5 ಲಕ್ಷ ಹಾಗೂ ಎಪಿಎಲ್ ಕಾರ್ಡ್ ಹೊಂದಿದವರಿಗೆ  ಒಂದೂವರೆ ಲಕ್ಷ ಹಣಕಾಸಿನ ನೆರವು ದೊರೆಯಲಿದೆ ಎಂದರು.

   ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಇದುವರೆಗೆ 5 ಕೋಟಿ 54 ಸಾವಿರ ಜನರು ನೋಂದಣಿ ಮಾಡಿದ್ದು, ಅವರೆಲ್ಲರಿಗೂ ಕಾರ್ಡ ವಿತರಣೆ ಜರುಗಲಿದೆ. ತದನಂತರ‌ ನೋಂದಣಿ ಮಾಡಿದವರಿಗೂ‌ ಆರೋಗ್ಯ ‌ಕಾರ್ಡ್ ನೀಡಲಾಗುವುದು.  ಈ ಸಿದ್ಧರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾಗ ದೇಶದಲ್ಲಿ ಪ್ರಪಥಮವಾಗಿ ಈ ಯೋಜನೆಯನ್ನು ರಾಜ್ಯ‌ ಸರ್ಕಾರ ಜಾರಿಗೊಳಿಸಿತ್ತು. ನಂತರ ಕೇಂದ್ರ ಸರ್ಕಾರವೂ ಸಹಿತ ಯೋಜನೆಯ ಅನುಷ್ಠಾನಕ್ಕೆ ಕೈಜೋಡಿಸಿತು ಎಂದು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap