ಬೀದರ್:
ಮಾತು ಬಾರದ ಮಹಿಳೆ ಬಾಯಿಗೆ ಬಟ್ಟೆ ತುರುಕಿ ವ್ಯಕ್ತಿಯೊಬ್ಬ ಅನುಚಿತವಾಗಿ ವರ್ತಿಸಿರುವ ಘಟನೆ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಯನ್ನು ಅಬು ಪಾಷಾ ಎಂದು ಗುರುತಿಸಲಾಗಿದೆ. ಘಟನೆ ನಡೆದ ದಿನ ಸಂತ್ರಸ್ತೆಯ ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದಾಗ ಆರೋಪಿ ವಿಕೃತಿ ಮೆರೆದಿದ್ದಾನೆ.
ಸಂತ್ರಸ್ತೆಯ ತಾಯಿ ಮನೆಗೆ ಮರಳುತ್ತಿದ್ದಂತೆ ಆಕೆಯನ್ನು ತಳ್ಳಿ ಆರೋಪಿ ಓಡಿಹೋಗಿದ್ದಾನೆ. ಕೂಡಲೇ ತಾಯಿ ಮಗಳ ಬಳಿ ಹೋಗಿ ಕೇಳಿದಾಗ ಸನ್ನೆ ಮಾಡಿ ನಡೆದ ವಿಷಯವನ್ನು ತಿಳಿಸಿದ್ದಾಳೆ. ಮಹಿಳೆ ಬಾಯಿಗೆ ಬಟ್ಟೆ ತುರುಕಿ, ಆಕೆಯ ಬಟ್ಟೆ ಹರಿದು ಮಾನಭಂಗ ಮಾಡಲು ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.
ಈ ಕುರಿತು ಸಂತ್ರಸ್ತೆಯ ತಾಯಿ ಹಳ್ಳಿಖೇಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, 329(4), 79 BNS, ಹಾಗೂ ಕಲಂ 3(1)w, 3(2) SC/ST ಕಾಯ್ದೆಯಡಿ ಕೇಸ್ ದಾಖಲಾಗಿದೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.








