ಮಗಳನ್ನೇ ಹುರಿದು ಮುಕ್ಕಿದ ಕಾಮಪಿಶಾಚಿ ತಂದೆ ಬಂಧನ

ದೇವನಹಳ್ಳಿ:

   ತಂದೆಯೇ ಮಗಳ ಮೇಲೆ ಕಾಮಪಿಶಾಚಿಯಂತೆ ಅತ್ಯಾಚಾರ ಎಸಗಿದ ಘಟನೆ ಹೊಸಕೋಟೆ  ನಗರದಲ್ಲಿ ವರದಿಯಾಗಿದೆ. ತಂದೆಯಿಂದ ಅತ್ಯಾಚಾರಕ್ಕೊಳಗಾದ ಮತ್ತು ಬೆದರಿಕೆ ಹಾಕಲ್ಪಟ್ಟ  ಯುವತಿಯೊಬ್ಬಳು ಮನೆ ಬಿಟ್ಟು ಪಿಜಿಯಲ್ಲಿ ಆಶ್ರಯ ಪಡೆದ ಪ್ರಕರಣ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ತಂದೆಯೇ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಹೊಸಕೋಟೆ ಮಹಿಳಾ ಠಾಣೆ ಪೊಲೀಸರು  ಆರೋಪಿ ಮಂಜುನಾಥ್​ನನ್ನು ವಶಕ್ಕೆ ಪಡೆದು ತನಿಖೆಗೆ ಒಳಪಡಿಸಿದ್ದಾರೆ.

    19 ವರ್ಷ ವಯಸ್ಸಿನ ಮಗಳ‌ ಮೇಲೆ ತಂದೆ ಮಂಜುನಾಥ ಅತ್ಯಾಚಾರ ಮಾಡಿದ್ದರ ಜತೆಗೆ ಈ ವಿಷಯವನ್ನು ಬಹಿರಂಗಪಡಿಸಿದರೆ ಕೊಲ್ಲುವುದಾಗಿ ಆಕೆಗೆ ಬೆದರಿಕೆಯನ್ನೂ ಹಾಕಿದ್ದಾನೆ. ಕಾರು ಚಾಲಕನಾಗಿರುವ ಮಂಜುನಾಥ್​​​ಗೆ ಮೂರು ಜನ ಮಕ್ಕಳು. ಇಬ್ಬರು ಹೆಣ್ಣು, ಒಂದು ಗಂಡು ಮಗು. ಹಿರಿಯ ಮಗಳ ಮೇಲೆ‌ ಅತ್ಯಾಚಾರ ಮಾಡಿರುವ ಆರೋಪ ಹಾಗೂ ದೂರು ದಾಖಲಾಗಿದೆ. ತಂದೆಯ ಕಾಟ ತಾಳಲಾರದೆ ಯುವತಿ ಪಿಜಿಯಲ್ಲಿ ವಾಸ ಮಾಡುತ್ತಿದ್ದಳು ಎನ್ನಲಾಗಿದೆ. ವಿಷಯ ತಿಳಿಸಿದರೆ ಕೊಲೆ ಮಾಡುವ ಬೆದರಿಕೆಯನ್ನೂ ಈತ ಹಾಕಿದ್ದ. ಹೀಗಾಗಿ ಜೀವ ಭಯದಿಂದ ಯುವತಿ ಮನೆಯಿಂದ ದೂರ ಉಳಿದಿದ್ದಳು.

   ತಂದೆಯಿಂದಾದ ಅತ್ಯಾಚಾರಕ್ಕೆ ನ್ಯಾಯ ಒದಗಿಸುವಂತೆ ಯುವತಿ ಆಗ್ರಹಿಸಿದ್ದು, ಸದ್ಯ ಪೊಲೀಸರಿಂದ ತನಿಖೆ ನಡೆಯುತ್ತಿದೆ. ಮಂಜುನಾಥನನ್ನು ಬಂಧಿಸಲಾಗಿದ್ದು, ಬಾಯಿ ಬಿಡಿಸಲಾಗುತ್ತಿದೆ. ಈತ ಇನ್ನಿತರರ ಮೇಲೂ ಇಂಥ ಕೃತ್ಯ ಎಸಗಿದ್ದಾನೆಯೇ ಎಂಬುದನ್ನೂ ಪರಿಶೀಲಿಸಲಾಗುತ್ತಿದೆ.