ಮಧುಗಿರಿ :
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಬಂಧಿಸುವಲ್ಲಿ ಕೊಡಿಗೇನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮೈದನಹಳ್ಳಿ ಗ್ರಾಮದ ಮಂಜುನಾಥ ಬಿನ್ ನಂಜುಂಡಪ್ಪ (36) ಬಂಧಿತ ಆರೋಪಿ. ಈತ ನ. 19 ರಂದು ಅದೇ ಗ್ರಾಮದ 7 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ತಲೆ ಮರೆಸಿಕೊಂಡಿದ್ದ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ವಂಶಿಕೃಷ್ಣ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಟಿ.ಜೆ ಉದೇಶ್ ಮತ್ತು ಮಧುಗಿರಿ ಡಿವೈಎಸ್ಪಿ ಪ್ರವೀಣ್ ರವರ ಮಾರ್ಗದರ್ಶನದಲ್ಲಿ ಮಧುಗಿರಿ ಸಿಪಿಐ ಎಂ.ಎಸ್. ಸರ್ದಾರ್, ಕೊಡಿಗೇನಹಳ್ಳಿ ಪೊಲೀಸ್ ಠಾಣೆಯ ಪಿ.ಎಸ್.ಐ ಕೆ.ಎನ್ ಫಾಲಾಕ್ಷಪ್ರಭು ಮತ್ತು ಸಿಬ್ಬಂದಿಯಾದ ಎ.ಎಸ್.ಐ ಮೆಹಬೂಬ್ ಖಾನ್ ಹಾಗೂ ಮುಖ್ಯಪೇದೆಗಳಾದ ವೆಂಕಟೇಶ್ ಮತ್ತು ಜಾಫರ್ ಸಾಧಿಕ್ ರವರ ತಂಡ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ತಂಡಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಭಿನಂದನೆ ಸಲ್ಲಿಸಿರುತ್ತಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
