ಬೆಂಗಳೂರು:
ನನ್ನ ತಂದೆ ಹಾಗು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ವಿ ಸೋಮಣ್ಣ ಅವರಿಗೆ ಪಕ್ಷ ನೀಡಿದ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದು ಹಲವು ಚುನಾವಣೆಗಳನ್ನು ತಮ್ಮ ಸ್ವಂತ ಬಲದಿಂದ ಗೆಲ್ಲಿಸಿಕೊಂಡು ಬಂದಿದ್ದಾರೆ. ಒಂದು ಚುನಾವಣೆ ಗೆದ್ದ ತಕ್ಷಣ ರಾಜಾಹುಲಿ, ಅವರ ಮಗ ಮರಿಹುಲಿ ಎಂದು ಕರೆದರೆ ಹೇಗೆ ಡಾ.ಅರುಣ್ ಸೋಮಣ್ಣ ಪ್ರಶ್ನಿಸಿದ್ದಾರೆ.
ವಸತಿ ಸಚಿವ ವಿ.ಸೋಮಣ್ಣ ಅವರ ಪುತ್ರ ಅರುಣ್ ಸೋಮಣ್ಣ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಪಕ್ಷದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಸಂಬಂಧ ಅರುಣ್ ಸೋಮಣ್ಣ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಯಾವುದೋ ಕಾರ್ಯಕ್ರಮದಲ್ಲಿ ಮಾತನಾಡಿರುವ ವಿಡಿಯೊವನ್ನು ಅವರಿಗೆ ಅನುಕೂಲ ಆಗುವ ರೀತಿಯಲ್ಲಿ ಬಳಸಿಕೊಳ್ಳುತ್ತಿದ್ದಾರೆ. ಚುನಾವಣೆಯಲ್ಲಿ ಎಲ್ಲರ ಪಾತ್ರವೂ ಇರುತ್ತದೆ. ನನಗೂ ವಿಜಯೇಂದ್ರ ಅವರಿಗೂ ವೈಯಕ್ತಿಕ ದ್ವೇಷ ಇಲ್ಲ. ನಮ್ಮನ್ನು ತುಳಿಯಲು ಬಂದರೆ ಸುಮ್ಮನಿರಲು ಸಾಧ್ಯವಿಲ್ಲ’ ಎಂದೂ ಎಚ್ಚರಿಕೆ ನೀಡಿದ್ದಾರೆ.
