ಅರುಣಾಚಲ ಪ್ರದೇಶದ ಸ್ಥಳಗಳಿಗೆ ಮರುನಾಮಕರಣ: ಚೀನಾ ಪ್ರಯತ್ನ ತಿರಸ್ಕರಿಸಿದ ಭಾರತ

ನವದೆಹಲಿ:

    ಅರುಣಾಚಲ ಪ್ರದೇಶದ ಕೆಲವು ಸ್ಥಳಗಳಿಗೆ ಮರುನಾಮಕರಣ ಮಾಡುವ ಚೀನಾದ ಪ್ರಯತ್ನಗಳನ್ನು ಭಾರತ ಬುಧವಾರ ಸಂಪೂರ್ಣವಾಗಿ ತಿರಸ್ಕರಿಸಿದೆ, ಅಂತಹ “ಅವಿವೇಕದ” ಪ್ರಯತ್ನಗಳು ಸಫಲವಾಗುವುದಿಲ್ಲ. ಅರುಣಾಚಲ ಪ್ರದೇಶ ರಾಜ್ಯವು “ನಮ್ಮ ಜೊತೆ ಇದೆ ಮತ್ತು ಇರುತ್ತದೆ” ಈ ವಾಸ್ತವವನ್ನು ಬದಲಾಯಿಸಲಾಗದು ಎಂದು ಹೇಳಿದೆ.

   ನೆರೆಯ ದೇಶವು ಟಿಬೆಟ್‌ನ ದಕ್ಷಿಣ ಭಾಗವೆಂದು ಹೇಳಿಕೊಳ್ಳುವ ಅರುಣಾಚಲ ಪ್ರದೇಶದ ಕೆಲವು ಸ್ಥಳಗಳಿಗೆ ಬೀಜಿಂಗ್ ಚೀನಾದ ಹೆಸರುಗಳನ್ನು ಘೋಷಿಸಿದ್ದಕ್ಕೆ ನವದೆಹಲಿಯಿಂದ ಈ ರೀತಿಯ ಪ್ರತಿಕ್ರಿಯೆ ಬಂದಿದೆ.

   ಅರುಣಾಚಲ ಪ್ರದೇಶದ ಸ್ಥಳಗಳನ್ನು ಚೀನಾ ಮರುನಾಮಕರಣ ಮಾಡುವ ಬಗ್ಗೆ ಮಾಧ್ಯಮ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ , ವಿದೇಶಾಂಗ ವ್ಯವಹಾರಗಳ ಇಲಾಖೆಯ ಅಧಿಕೃತ ವಕ್ತಾರ ರಣಧೀರ್ ಜೈಸ್ವಾಲ್ , ಭಾರತದ ಅರುಣಾಚಲ ಪ್ರದೇಶದ ಸ್ಥಳಗಳಿಗೆ ಹೆಸರಿಸಲು ಚೀನಾ ತನ್ನ ವ್ಯರ್ಥ ಮತ್ತು ಅಸಂಬದ್ಧ ಪ್ರಯತ್ನಗಳನ್ನು ಮುಂದುವರಿಸಿದೆ ಎಂಬುದನ್ನು ನಾವು ಗಮನಿಸಿದ್ದೇವೆ.

   ನಮ್ಮ ತತ್ವಬದ್ಧ ನಿಲುವಿಗೆ ಅನುಗುಣವಾಗಿ, ನಾವು ಅಂತಹ ಪ್ರಯತ್ನಗಳನ್ನು ಸ್ಪಷ್ಟವಾಗಿ ತಿರಸ್ಕರಿಸುತ್ತೇವೆ. ಅರುಣಾಚಲ ಪ್ರದೇಶವು ಭಾರತದ ಅವಿಭಾಜ್ಯ ಭಾಗವಾಗಿತ್ತು, ಈಗಲೂ ಇದೆ ಮತ್ತು ಯಾವಾಗಲೂ ಉಳಿಯುತ್ತದೆ ಎಂಬ ವಾಸ್ತವವನ್ನು ಬದಲಾಯಿಸುವುದಿಲ್ಲ ಎಂದಿದ್ದಾರೆ. ನಮ್ಮ ತತ್ವಬದ್ಧ ನಿಲುವಿಗೆ ಅನುಗುಣವಾಗಿ, ನಾವು ಅಂತಹ ಪ್ರಯತ್ನಗಳನ್ನು ಸ್ಪಷ್ಟವಾಗಿ ತಿರಸ್ಕರಿಸುತ್ತೇವೆ” ಎಂದು ಅವರು ಹೇಳಿದರು.

Recent Articles

spot_img

Related Stories

Share via
Copy link