ಬಳ್ಳಾರಿ:
ಮನೆಯಲ್ಲಿ ಕುಸಿದು ಬಿದ್ದು, ಅನಾರೋಗ್ಯಕ್ಕೆ ಒಳಗಾಗಿದ್ದ ಆಶಾ ಕಾರ್ಯಕರ್ತೆಯೊಬ್ಬರು ಸಾವನ್ನಪ್ಪಿದ್ದಾರೆ.
ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಬಾದನಟ್ಟಿ ಗ್ರಾಮದ ಆಶಾ ಕಾರ್ಯಕರ್ತೆ ಸಾಕಮ್ಮ ಮೃತ ಮಹಿಳೆ. ಇವರು ಕಳೆದ ಹತ್ತು ವರ್ಷಗಳಿಂದ ಮಧುಮೇಹದಿಂದ ಬಳಲುತ್ತಿದ್ದು, 3 ದಿನಗಳಿಂದ ಹಿಂದೆ ಮನೆಯಲ್ಲಿ ಜಾರಿ ಬಿದ್ದಿದ್ದರು. ಜೊತೆಗೆ ಅನಾರೋಗ್ಯಕ್ಕೆ ಒಳಗಾಗಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಕೊರೊನಾ ಕೆಲಸದಿಂದ ಜಿಲ್ಲಾಡಳಿತ ಇವರನ್ನು ಕೈ ಬಿಟ್ಟಿತ್ತು.
ಕಳೆದ ಕೆಲ ದಿನಗಳಿಂದ ಇವರು ಕೆಲಸಕ್ಕೆ ಗೈರಾಗಿದ್ದರು. ಮುಂಜಾಗ್ರತಾ ಕ್ರಮವಾಗಿ ಆಶಾ ಕಾರ್ಯಕರ್ತೆಯ ಕೊರೊನಾ ಪರೀಕ್ಷೆ ನಡೆಸುವುದಾಗಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಎಚ್.ಎಲ್. ಜನಾರ್ದನ ಮಾಹಿತಿ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
