ತಗ್ಗಿಬಗ್ಗಿ ನಡೆಯಬೇಕೆಂಬ ಹೇಳಿಕೆಗೆ ಅಶೋಕ್ ಕೌಂಟರ್….!

ಬೆಂಗಳೂರು

   ಬಿಬಿಎಂಪಿ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ನೀಡುವಾಗ ಜಯನಗರವನ್ನು ಹೊರಗಿಟ್ಟಿರುವ ವಿಚಾರ ರಾಜಕೀಯವಾಗಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಬಳಿ ಸಂಸದ ತೇಜಸ್ವಿ ಸೂರ್ಯ ಪ್ರಸ್ತಾಪಿಸಿದ್ದರು. ಆ ಸಂದರ್ಭದಲ್ಲಿ ಡಿಸಿಎಂ ನೀಡಿದ್ದ ತಗ್ಗಿ-ಬಗ್ಗಿ ನಡೆಯಬೇಕೆಂಬ ಹೇಳಿಕೆ ಈಗ ಆಕ್ಷೇಪಕ್ಕೆ ಗುರಿಯಾಗಿದೆ. ಈ ವಿಚಾರವಾಗಿ ಖಂಡಿಸಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ಟ್ವೀಟ್ ಮಾಡಿದ್ದು, ಹಾಗೆ ಹೇಳಲು ಬೆಂಗಳೂರೇನು ನಿಮ್ಮ ಜಹಗೀರೇ ಎಂದು ಡಿಕೆ ಶಿವಕುಮಾರ್​​ ಅವರನ್ನು ಪ್ರಶ್ನಿಸಿದ್ದಾರೆ.

   ‘ಅನುದಾನ ಬೇಕಾದರೆ ನನ್ನ ಬಳಿ ತಗ್ಗಿ ಬಗ್ಗಿ ನಡೆಯಬೇಕು – ಡಿಸಿಎಂ ಸಾಹೇಬರ ಲೇಟೆಸ್ಟ್ ನುಡಿಮುತ್ತುಗಳು. ಡಿಕೆ ಶಿವಕುಮಾರ್ ಅವರೇ, ನಿಮ್ಮ ಬಳಿ ತಗ್ಗಿ-ಬಗ್ಗಿ ಇರಬೇಕು ಅನ್ನುವುದಕ್ಕೆ ಬೆಂಗಳೂರು ನಗರವನ್ನು ನಿಮ್ಮ ಜಹಗೀರು ಅಂದುಕೊಡಿದ್ದೀರಾ? ಅಧಿಕಾರ ಎನ್ನುವುದು ಮತದಾರರು ಕೊಟ್ಟಿರುವ ಭಿಕ್ಷೆ, ಸಂವಿಧಾನ ಕೊಟ್ಟಿರುವ ಜವಾಬ್ದಾರಿಯೇ ಹೊರತು ಪಾಳೆಗಾರಿಕೆ ಅಲ್ಲ. ಪ್ರಜಾಪ್ರಭುತ್ವದಲ್ಲಿ ನಾವು ತಗ್ಗಿ-ಬಗ್ಗಿ ನಡೆಯಬೇಕಿರುವುದು ಮತಭಿಕ್ಷೆ ನೀಡಿರುವ ಮತದಾರ ಪ್ರಭುಗಳಿಗೆ, ಪ್ರಜಾಪ್ರಭುತ್ವ ವ್ಯವಸ್ಥೆ ನೀಡಿರುವ ಸಂವಿಧಾನಕ್ಕೆ ಹೊರತು ಯಾವ ದೊಣ್ಣೆ ನಾಯಕನಿಗೂ ಅಲ್ಲ’ ಎಂದು ಅಶೋಕ್ ತಿರುಗೇಟು ನೀಡಿದ್ದಾರೆ.

   ಈ ನಿಮ್ಮ (ಡಿಕೆ ಶಿವಕುಮಾರ್ ಉದ್ದೇಶಿಸಿ) ಒಣ ಪ್ರತಿಷ್ಠೆ, ಧಿಮಾಕು, ದರ್ಬಾರು ಎಲ್ಲ ಬಿಟ್ಟು ಜನರ ಸೇವೆ ಮಾಡುವ ಮನೋಭಾವನೆ ಬೆಳೆಸಿಕೊಳ್ಳಿ. ಯಾವುದೇ ಕ್ಷೇತ್ರದ ಬಗ್ಗೆ ತಾರತಮ್ಯ ಮಾಡದೆ ಸಚಿವರಾಗಿ ನಿಮ್ಮ ಕರ್ತವ್ಯ ನಿರ್ವಹಿಸಿ’ ಎಂದು ಟ್ವಿಟರ್​ನಲ್ಲಿ ಅಶೋಕ್  ಅಶೋಕ್ ಟ್ವೀಟ್ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್, ನಾನು ಆ ರೀತಿಯಾಗಿ ಹೇಳಿದ್ದು ಸಂಸದ ತೇಜಸ್ವಿ ಸೂರ್ಯ ಬಳಿ ಶಾಸಕ ಸಿಕೆ ರಾಮಮೂರ್ತಿ ಬಗ್ಗೆ. ನಾನು ಎಂಎಲ್ಎ ಆದಮೇಲೆ ಬೆಂಗಳೂರು ಅಧೋಗತಿಗೆ ಹೋಗಿದೆ ಎಂದಿದ್ದರು. ಅದಕ್ಕೆ ಹಾಗೆ ಹೇಳಿದ್ದೆ. ಅಲ್ಲದೆ, ಏನು ಅಗತ್ಯವಿದೆಯೋ ಲೆಕ್ಕ ಕೊಡಿ ಅಂತ ಹೇಳಿದ್ದೆ ಎಂದು ಹೇಳಿದರು. 

   ನಮ್ಮ ಮೆಟ್ರೋ ನಾಗಸಂದ್ರ ಮಾದಾವರ ವಿಸ್ತರಿತ ಮಾರ್ಗದ ಮೆಟ್ರೋ ರೈಲಿನಲ್ಲಿ ಮಾತನಾಡಿದ್ದ ಸಂದರ್ಭ ಬುಧವಾರ ಸಂಸದ ತೇಜಸ್ವಿ ಸೂರ್ಯ ಜಯನಗರಕ್ಕೆ ಅನುದಾನ ನೀಡದಿರುವ ಬಗ್ಗೆ ಡಿಕೆ ಶಿವಕುಮಾರ್​ ಬಳಿ ಪ್ರಸ್ತಾಪಿಸಿದ್ದರು. ಆಗ ಡಿಕೆ ಶಿವಕುಮಾರ್ ತಗ್ಗಿ-ಬಗ್ಗಿ ನಡೆಯುವ ಹೇಳಿಕೆ ನೀಡಿದ್ದರು.

Recent Articles

spot_img

Related Stories

Share via
Copy link