ಸಿಎಂ ಸವಾಲಿಗೆ ಅಶೋಕ್‌ ಪ್ರತಿ ಸವಾಲ್…!

ಬೆಂಗಳೂರು:

   ಕೇಸರಿ ಪಕ್ಷ ಬಿಜೆಪಿ ಕಳೆದ ಸಲ ಅಧಿಕಾರದಲ್ಲಿದ್ದಾಗ ನಡೆದಿದೆ ಎನ್ನಲಾದ 21 ಹಗರಣಗಳ ಕುರಿತು ತನಿಖೆಗೆ ಆದೇಶಿಸುವಂತೆ ಕೇಸರಿ ಪಡೆ ನಾಯಕರು ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

  ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾಗಿರುವ 187 ಕೋಟಿ ರೂಪಾಯಿಗಳ ಹಗರಣದಲ್ಲಿ ಭಾಗಿಯಾದವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಕ್ಷಿಸುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

  ಬಿಜೆಪಿ ಆಡಳಿತ ಸಮಯದಲ್ಲಿ 21 ಹಗರಣಗಳು ರಾಜ್ಯದಲ್ಲಿ ನಡೆದಿವೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಕಳೆದ 15 ತಿಂಗಳಿನಿಂದ ನೀವು ಅಧಿಕಾರದಲ್ಲಿದ್ದೀರಿ. ಈ ಹಗರಣಗಳ ತನಿಖೆಗೆ ನೀವು ಏಕೆ ಇಷ್ಟು ಸಮಯ ತೆಗೆದುಕೊಂಡಿದ್ದೀರಿ? ನಾವು ತನಿಖೆಗೆ ಸಿದ್ಧರಿದ್ದೇವೆ ಎಂದು ವಿಧಾನ ಸಭೆ ವಿರೋಧ ಪಕ್ಷ ನಾಯಕ ಆರ್ ಅಶೋಕ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.

  ವಾಲ್ಮೀಕಿ ಅಭಿವೃದ್ಧಿ ನಿಗಮದ 88 ಕೋಟಿ ರೂಪಾಯಿಗಳನ್ನು ತೆಲಂಗಾಣದ ವಿವಿಧ ಬ್ಯಾಂಕ್ ಖಾತೆಗಳಿಗೆ ತ್ವರಿತವಾಗಿ ವರ್ಗಾಯಿಸಿದ ರೀತಿ, ನಮ್ಮ ವಿರುದ್ಧದ ಅಕ್ರಮಗಳ ಆರೋಪದ ಬಗ್ಗೆ ಕೂಡ ಕ್ಷಿಪ್ರವಾಗಿ ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು. 

  ಬುಡಕಟ್ಟು ಕಲ್ಯಾಣ ಸಚಿವ ಮತ್ತು ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಅವರನ್ನು ರಕ್ಷಿಸಲು ಸಿದ್ದರಾಮಯ್ಯ ಅವರು ವಾಲ್ಮೀಕಿ ನಿಗಮ ಮತ್ತು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅಧಿಕಾರಿಗಳ ಮೇಲೆ ಆರೋಪ ಹೊರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

  ಅಧಿಕಾರಿಗಳು ಬಹಳ ಅಲ್ಪ ಮೊತ್ತ ತೆಗೆದುಕೊಂಡಿದ್ದಾರೆ. ಈ ಹಗರಣದಲ್ಲಿ ದೊಡ್ಡ ಮೊತ್ತವು ಕಾಂಗ್ರೆಸ್ ಅಧಿಕಾರದಲ್ಲಿರುವ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್ ನಾಯಕರಿಗೆ ಹೋಗಿದೆ ಎಂದು ಆರೋಪಿಸಿದರು.

   ಮೇ 26 ರಂದು ಪಾಲಿಕೆಯ ಲೆಕ್ಕ ಅಧೀಕ್ಷಕ ಚಂದ್ರಶೇಖರನ್ ಪಿ ಆತ್ಮಹತ್ಯೆ ಮಾಡಿಕೊಂಡ ನಂತರ ಆರೋಪದ ವಂಚನೆ ಬೆಳಕಿಗೆ ಬಂದಿದೆ. ಪಾಲಿಕೆಗೆ ಸೇರಿದ 187 ಕೋಟಿ ರೂಪಾಯಿಯನ್ನು ವಿವಿಧ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ ಎಂದು ಚಂದ್ರಶೇಖರನ್ ಆತ್ಮಹತ್ಯೆ ಪತ್ರದಲ್ಲಿ ಆರೋಪಿಸಿದ್ದರು.

   ನಂತರ ಕಾಂಗ್ರೆಸ್ ಸರ್ಕಾರ, ವಿಶೇಷ ತನಿಖಾ ತಂಡವನ್ನು (SIT) ರಚಿಸಿದ್ದು, ಇದುವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಜನರನ್ನು ಬಂಧಿಸಿದೆ. ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಗೆ ದೂರು ನೀಡಿದ ನಂತರ ಸಿಬಿಐ ಕೂಡ ಪ್ರಕರಣದ ತನಿಖೆ ನಡೆಸುತ್ತಿದೆ.

   ಹಗರಣ ಬೆಳಕಿಗೆ ಬಂದ ನಂತರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಸದ್ಯ ಜಾರಿ ನಿರ್ದೇಶನಾಲಯದ ವಶದಲ್ಲಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap