ಬೆಂಗಳೂರು:
ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಶುಕ್ರವಾರ ನಡೆಯಲಿದ್ದು, ಈ ಸಂದರ್ಭದಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಆಯ್ಕೆಯನ್ನು ಘೋಷಿಸುವ ಸಾಧ್ಯತೆಯಿದೆ.
‘ನನಗೆ ಗೊತ್ತಿಲ್ಲ, ಪಕ್ಷ ತೀರ್ಮಾನ ಮಾಡಬೇಕು. ಪಕ್ಷ ಯಾರನ್ನು ಈ ಹುದ್ದೆಗೆ ಪರಿಗಣಿಸುತ್ತದೆಯೋ ಅವರಿಗೆ ಹುದ್ದೆ ಸಿಗುತ್ತದೆ. ನಾವ್ಯಾರೂ ಅರ್ಜಿ ಸಲ್ಲಿಸಿಲ್ಲ. ಅಂತಹ ಸಂಸ್ಕೃತಿ ನಮ್ಮ ಪಕ್ಷದಲ್ಲಿ ಇಲ್ಲ’ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಶಾಸಕರಾದ ಸುನೀಲ್ ಕುಮಾರ್ ವಿ, ಅಶ್ವತ್ಥ್ ನಾರಾಯಣ್ ಮತ್ತು ಆರಗ ಜ್ಞಾನೇಂದ್ರ ಅವರ ಜೊತೆಗೆ ಆರ್ ಅಶೋಕ್ ಅವರ ಹೆಸರು ಈ ಹುದ್ದೆಗೆ ಕೇಳಿಬರುತ್ತಿದೆ.
ವಿಪಕ್ಷ ನಾಯಕನ ಹುದ್ದೆಗೆ ತಮ್ಮ ಅವರ ಹೆಸರೂ ಹರಿದಾಡುತ್ತಿರುವ ಬಗ್ಗೆ ಅರಿವಿದೆ ಎಂದ ಅವರು, ನಾನು ಸೇರಿದಂತೆ ನಾಲ್ಕೈದು ಜನ ಆಕಾಂಕ್ಷಿಗಳಿದ್ದು, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂಬುದಷ್ಟೇ ನಮ್ಮ ಗುರಿ. ಹೀಗಾಗಿ ಯಾವುದೇ ಗೊಂದಲ, ಅಡೆತಡೆಗಳಿಲ್ಲದೆ ಹೊಸ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ. ನಾನು ನಿನ್ನೆ ವಿ ಸುನೀಲ್ ಕುಮಾರ್, ಸಿಎನ್ ಅಶ್ವತ್ಥ್ ನಾರಾಯಣ್ ಅವರೊಂದಿಗೆ ಮಾತನಾಡಿದ್ದೇನೆ. ಯಾರೇ ಆಯ್ಕೆಯಾದರೂ, ನಮ್ಮ ಅಭ್ಯಂತರವಿಲ್ಲ. ಪಕ್ಷ ಶ್ರೇಷ್ಠವಾಗಿದ್ದು, ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದೇ ನಮ್ಮ ಆದ್ಯತೆ ಎಂದರು.
ರಾಜ್ಯದಲ್ಲಿ ಪ್ರಮುಖ ವಿರೋಧ ಪಕ್ಷವಾಗಿರುವ ಬಿಜೆಪಿ ಇನ್ನೂ ತನ್ನ ಶಾಸಕಾಂಗ ಪಕ್ಷದ ನಾಯಕನನ್ನು ನೇಮಿಸಿಲ್ಲ. ಈ ಹಿಂದೆ ಜುಲೈನಲ್ಲಿ ನಡೆದ ವಿಧಾನಸಭೆ ಅಧಿವೇಶನ ವಿರೋಧ ಪಕ್ಷದ ನಾಯಕರಿಲ್ಲದೇ ನಡೆದಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ