ಮಂಡ್ಯ ಉಸ್ತುವಾರಿಯಿಂದ ಅಶೋಕ್‌ ಮುಕ್ತರಾಗಿದ್ದಾರೆ : ಸಿಎಂ

ಬೆಂಗಳೂರು: 

    ಮಂಡ್ಯ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯಿಂದ  ಆರ್.ಅಶೋಕ್ ಅವರನ್ನು ಮುಕ್ತಗೊಳಿಸ ಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ತಮ್ಮನ್ನು ಉಸ್ತುವಾರಿಯಿಂದ ಮುಕ್ತಗೊಳಿಸುವಂತೆ ಆಶೋಕ್ ತಮಗೆ ಪತ್ರ ಬರೆದಿದ್ದರು ಎಂದು ಬೊಮ್ಮಾಯಿ ತಿಳಿಸಿದರು. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಉಸ್ತುವಾರಿ ಬದಲಾಯಿಸಲಾಗಿದ್ದು, ಇನ್ನು ಯಾರನ್ನೂ ನೇಮಕ ಮಾಡಿಲ್ಲ ಎಂದು ಹೇಳಿದ್ದಾರೆ.

    ಅಶೋಕ್ ಅವರನ್ನು ಮಂಡ್ಯ ಜಿಲ್ಲಾ ಉಸ್ತುವಾರಿಯಾಗಿ ನೇಮಕ ಮಾಡಿದ ಮೇಲೆ  ಸ್ವ ಪಕ್ಷೀಯ ರಿಂದಲೇ ತೀವ್ರ ವಿರೋಧ ವ್ಯಕ್ತವಾಗಿತ್ತು. ಮಂಡ್ಯದಲ್ಲಿ ಗೋ ಬ್ಯಾಕ್ ಅಶೋಕ್ ಅಭಿಯಾನ ನಡೆದಿತ್ತು. ಜಿಲ್ಲೆಯಲ್ಲಿ ಹೊತ್ತಿಕೊಂಡಿರುವ ಅಸಮಾಧಾನ ಹೊಗೆ ಹೊತ್ತಿಕೊಂಡ ಹಿನ್ನೆಲೆಯಲ್ಲಿ. ಪಕ್ಷದ ಸಂಘಟನೆಗೆ ವ್ಯತಿರಿಕ್ತ ಪರಿಣಾಮ ಬೀರಬಹುದೆಂಬ ಮುನ್ನೆಚ್ಚರಿಕೆಯಿಂದ ಅಶೋಕ್ ಅವರನ್ನು ಬದಲಾಯಿಸಲಾಗಿದೆ ಎನ್ನಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿಛ

Recent Articles

spot_img

Related Stories

Share via
Copy link
Powered by Social Snap