ನಾಗಮಂಗಲ ಪ್ರಕರಣ : NIA ತನಿಖೆಗೆ ಆರ್‌ ಅಶೋಕ್‌ ಒತ್ತಾಯ

ಬೆಂಗಳೂರು:

    ನಾಗಮಂಗಲ ಪ್ರಕರಣ NIA ತನಿಖೆಗೆ ಒಪ್ಪಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಮೂವರು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆಗಳು ಕೂಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳ ಹೇಳುತ್ತಿದ್ದು, ಈ ಕೋಮುದಳ್ಳುರಿಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗಿತ್ತಿದೆ.

   ಇದರ ಬೆನ್ನಲ್ಲೇ ಚಿಕ್ಕಮಗಳೂರಲ್ಲಿ ಬೈಕ್ ನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದಿರುವ ಪುಂಡಾಟ, ದಾವಣಗೆರೆಯ ಗಾಂಧಿನಗರ ಹಾಗೂ ಅಹ್ಮದ್ ನಗರಗಳಲ್ಲಿ ಹಿಂದೂ ಯುವಕರು ಬಾವುಟ ಕಟ್ಟಿದ್ದಕ್ಕೆ ಮತಾಂಧ ಪುಂಡರು ಅವರ ಮೇಲೆ ಹಲ್ಲೆ ಮಾಡಿರುವುದು, ಇವನ್ನೆಲ್ಲಾ ಗಮನಿಸುತ್ತಿದ್ದರೆ ಈ ಪ್ರಚೋದನಕಾರಿ ಘಟನೆಗಳು ಗಣೇಶೋತ್ಸವವನ್ನೇ ಟಾರ್ಗೆಟ್ ಮಾಡಿರುವಂತಿದೆ. ಇಂತಹ ಘಟನೆಗಳು ಅಯೋಧ್ಯ ರಾಮ ಮಂದಿರದ ಉದ್ಘಾಟನೆ ಸಂದರ್ಭದಲ್ಲಿಯೂ ನಡೆದಿತ್ತು.

   ಹಿಂದೂಗಳ ಹಬ್ಬಗಳು, ಉತ್ಸವಗಳು, ಸಂಭ್ರಮಾಚರಣೆಗಳನ್ನೇ ಗುರಿಯಾಗಿಸಿ ರಾಜ್ಯಾದ್ಯಂತ ನಡೆಸುತ್ತಿರುವ ಇಂತಹ ದುಷ್ಕೃತ್ಯಗಳ ಹಿಂದೆ ಮತೀಯ ಮೂಲಭೂತವಾದಿ ಸಂಘಟನೆಗಳ ದೊಡ್ಡ ಜಾಲವೇ ಇರುವಂತಿದೆ. ಅಂತಾರಾಜ್ಯ, ಅಂತರಾಷ್ಟ್ರೀಯ ನಂಟು ಹೊಂದಿರುವ ಇಂತಹ ವ್ಯವಸ್ಥಿತ, ಪ್ರಾಯೋಜಿತ, ಜಾಲವನ್ನ ಬೇಧಿಸುವುದು ಸ್ಥಳೀಯ ಪೊಲೀಸರಿಂದ ಅಸಾಧ್ಯವಾಗಿದ್ದು, ಕೂಡಲೇ ಈ ಪ್ರಕರಣಗಳನ್ನ NIA ತನಿಖೆಗೆ ಒಪ್ಪಿಸಬೇಕು ಎಂದು ಗೃಹ ಸಚಿವ ಜಿ ಪರಮೇಶ್ವರ ಹಾಗು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಒತ್ತಾಯಿಸುತ್ತೇನೆ ಎಂದಿದ್ದಾರೆ.

Recent Articles

spot_img

Related Stories

Share via
Copy link
Powered by Social Snap