ಬೆಂಗಳೂರು
ಚುನಾವಣೆ ಹತ್ತಿರದಲ್ಲಿರುವಾಗಲೇ ಟಿಪ್ಪುವನ್ನು ಹೊಡೆದು ಹಾಕಿದ ಹಾಗೆ ಸಿದ್ದರಾಮಯ್ಯನನ್ನು ಹೊಡೆದು ಹಾಕಬೇಕೆಂದು ಹೇಳಿರುವ ಸಚಿವ ಅಶ್ವತ್ಥ ನಾರಾಯಣ್ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರಿ ವಿವಾದಕ್ಕೆ ಗುರಿಯಾಗಿದೆ.
ಮಂಡ್ಯ ಜಿಲ್ಲೆಯ ಸಾತನೂರು ಹೊರವಲಯದ ಕಂಬದ ನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಸಚಿವ ಅಶ್ವತ್ಥ ನಾರಾಯಣ್ ಟಿಪ್ಪು ಸುಲ್ತಾನ್ ಅವರನ್ನು ನಿಂದಿಸುವ ಬರದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. “ನಿಮಗೆ ಟಿಪ್ಪು ಬೇಕಾ..? ಸಾವರ್ಕರ್ ಬೇಕಾ..? ಟಿಪ್ಪು ಬೇಡಾ ಅಂದ್ರೆ ಸಿದ್ದರಾಮಯ್ಯ ಅವರನ್ನು ಟಿಪ್ಪು ಕಳುಹಿಸಿದ ಹಾಗೆ ಕಳಿಸಬೇಕು. ಉರಿಗೌಡ ಮತ್ತು ನಂಜೇಗೌಡ ಏನ್ ಮಾಡಿದ್ದರು. ಹಾಗೇಯೇ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು” ಎಂದು ಹೇಳಿದ್ದರು.
