ಸೆ.21ರಂದು ದೆಹಲಿ ನೂತನ ಸಿಎಂ ಆಗಿ ಅತಿಶಿ ಪ್ರಮಾಣ

ನವದೆಹಲಿ:

    ಎಎಪಿ ನಾಯಕಿ ಅತಿಶಿ ಅವರು ಸೆಪ್ಟೆಂಬರ್ 21ರಂದು ದೆಹಲಿ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಅವರೊಂದಿಗೆ ಐವರು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಅತಿಶಿ ನೇತೃತ್ವದ ದೆಹಲಿ ಸಚಿವ ಸಂಪುಟಕ್ಕೆ ಆಪ್‌ ಶಾಸಕ ಮುಖೇಶ್‌ ಅಹ್ಲಾವತ್‌ ಅವರು ಹೊಸದಾಗಿ ಸೇರ್ಪಡೆಯಾಗುತ್ತಿದ್ದು, ಕೇಜ್ರಿವಾಲ್ ಸಂಪುಟದ ನಾಲ್ವರು ಸಚಿವರನ್ನು ಉಳಿಸಿಕೊಳ್ಳಲಾಗುವುದು ಎಂದು ಪಕ್ಷ ಗುರುವಾರ ತಿಳಿಸಿದೆ.

   ಸಚಿವರಾದ ಗೋಪಾಲ್ ರೈ, ಸೌರಭ್ ಭಾರದ್ವಾಜ್, ಕೈಲಾಶ್ ಗಹ್ಲೋಟ್ ಮತ್ತು ಇಮ್ರಾನ್ ಹುಸೇನ್ ಅವರು ಅತಿಶಿ ನೇತೃತ್ವದ ಸಂಪುಟದಲ್ಲೂ ಮುಂದುವರಿಯಲಿದ್ದಾರೆ ಎಂದು ಎಎಪಿ ಹೇಳಿದೆ. ಸಮಾಜ ಕಲ್ಯಾಣ ಸಚಿವ ರಾಜ್ ಕುಮಾರ್ ಆನಂದ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ದೆಹಲಿಯ ಸುಲ್ತಾನ್‌ಪುರ ಮಜ್ರಾದ ಶಾಸಕ ಅಹ್ಲಾವತ್ ಅವರನ್ನು ನೇಮಕ ಮಾಡಲಾಗಿದೆ.

   ಆನಂದ್ ಅವರು ಕೇಜ್ರಿವಾಲ್ ಸರ್ಕಾರಕ್ಕೆ ರಾಜೀನಾಮೆ ನೀಡಿ, ಕಳೆದ ಏಪ್ರಿಲ್‌ನಲ್ಲಿ ಆಮ್ ಆದ್ಮಿ ಪಕ್ಷವನ್ನು(ಎಎಪಿ) ತೊರೆದಿದ್ದರು.ದೆಹಲಿ ಸರ್ಕಾರದ ಸಚಿವ ಸಂಪುಟ ಮುಖ್ಯಮಂತ್ರಿ ಸೇರಿದಂತೆ ಏಳು ಸದಸ್ಯರನ್ನು ಹೊಂದಿದೆ. ಏಳನೇ ಸಚಿವರ ಹೆಸರು ಇನ್ನಷ್ಟೇ ಪ್ರಕಟಿಸಬೇಕಿದೆ.

   ಮುಂದಿನ ವರ್ಷ ಫೆಬ್ರವರಿಯಲ್ಲಿ ದೆಹಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಕಾರಣ ಹೊಸ ಮುಖ್ಯಮಂತ್ರಿ ಮತ್ತು ಹೊಸ ಸೇರ್ಪಡೆಯ ಅವಧಿಯು ಸಂಕ್ಷಿಪ್ತವಾಗಿರುತ್ತದೆ.

Recent Articles

spot_img

Related Stories

Share via
Copy link
Powered by Social Snap