ಇಬ್ಬರು ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ, ಪತಿಯ ಮೇಲೆ ದೂರು

ಬೆಂಗಳೂರು:

   ರಾಜಧಾನಿಯಲ್ಲಿ  ಒಂದು ಘೋರ ದುರಂತ ಸಂಭವಿಸಿದ್ದು, 5 ವರ್ಷದ ಪುತ್ರಿ ಹಾಗು ಒಂದುವರೆ ವರ್ಷದ ಪುತ್ರನ ಕೊಂದು ಮಹಿಳೆ ಆತ್ಮಹತ್ಯೆಗೆ  ಶರಣಾಗಿದ್ದಾರೆ. ಬೆಂಗಳೂರಿನ ಬಾಗಲಗುಂಟೆ ಪಾಳ್ಯ ಭುವನೇಶ್ವರಿ ನಗರದಲ್ಲಿ ಈ ದುರಂತ ಸಂಭವಿಸಿದೆ. ಐದು ವರ್ಷದ ಪುತ್ರಿ ಹಾಗೂ ಒಂದೂವರೆ ವರ್ಷದ ಪುತ್ರನ ಕೊಂದು ತಾಯಿ ವಿಜಯಲಕ್ಷ್ಮಿ ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

   ಬಾಗಲಗುಂಟೆ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 5 ವರ್ಷದ ಹಿಂದೆ ವಿಜಯಲಕ್ಷ್ಮಿ, ರಮೇಶ್​ ಎಂಬಾತನ ಜೊತೆ ಮದುವೆ ಮಾಡಿಕೊಂಡಿದ್ರು. ಆಕೆಯ ಪತಿ ಮಾಲ್​ನಲ್ಲಿ ಕೆಲಸ ಮಾಡುತ್ತಿದ್ದ. ಬೆಂಗಳೂರಲ್ಲಿ ನೆಲೆಸಿದ್ದ ಈ ದಂಪತಿಗೆ 4 ವರ್ಷದ ಬೃಂದಾ, ಒಂದೂವರೆ ವರ್ಷದ ಭುವನ್​ ಎಂಬ ಇಬ್ಬರು ಮಕ್ಕಳಿದ್ದರು. ಇವರ ಸಂಸಾರದಲ್ಲಿ ಕೆಲ ಸಮಸ್ಯೆಗಳಿದ್ದವು, ಕೌಟುಂಬಿಕ ಸಮಸ್ಯೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ನಿನ್ನೆ ವಿಜಯಲಕ್ಷ್ಮಿ ತಂಗಿ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆಂದು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

   ತಾನು ಮತ್ತೊಂದು ಮದುವೆಯಾಗಿದ್ದು, ಡೈವೋರ್ಸ್ ಕೊಡುವಂತೆ ಪತ್ನಿಗೆ ಪತಿ ರಮೇಶ್​ ಬೆದರಿಕೆ ಹಾಕುತ್ತಿದ್ದ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಹೀಗಾಗಿ ಪದೇ ಪದೆ ಕುಟುಂಬದಲ್ಲಿ ಜಗಳ ಆಗುತ್ತಿತ್ತು. ಈ ವಿಚಾರ ವಿಜಯಲಕ್ಷ್ಮಿ ತನ್ನ ಕುಟುಂಬಸ್ಥರ ಬಳಿ ಹೇಳಿಕೊಂಡಿದ್ದಳು ಎನ್ನಲಾಗುತ್ತಿದೆ. ಇದರಿಂದಲೇ ನೊಂದು ತನ್ನ ಮಕ್ಕಳನ್ನು ಕೊಂದು ವಿಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. 

Recent Articles

spot_img

Related Stories

Share via
Copy link