ಸಾಲ ವಾಪಾಸ್‌ ಮಾಡಿಲ್ಲವೆಂದು ಹಿಂದೂ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಮುಸ್ಲಿಂ ಪುರುಷ!

ಢಾಕಾ: 

    ಬಾಂಗ್ಲಾದೇಶದಲ್ಲಿ ಪದೇ ಪದೇ ಹಿಂದೂಗಳ ಮೇಲಿನ ದೌರ್ಜನ್ಯ  ಬೆಳಕಿಗೆ ಬರುತ್ತಿವೆ. ಇದೀಗ ಮುಸ್ಲಿಂ ಪುರುಷನೊಬ್ಬ ಹಿಂದೂ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ, ಹಿಂದೂ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಕುಮಿಲ್ಲಾದಲ್ಲಿರುವ ತನ್ನ ತಂದೆಯ ಮನೆಯಲ್ಲಿ ಒಬ್ಬಂಟಿಯಾಗಿದ್ದಳು. ಆ ಸಮಯದಲ್ಲಿ ಆರೋಪಿ ಆರೋಪಿ ಫಜರ್ ಅಲಿ ಆಕೆಯ ಮನೆ ಬಾಗಿಲು ಬಡಿದಿದ್ದಾನೆ. ಅವಳು ಬಾಗಿಲು ತೆರೆಯಲು ನಿರಾಕರಿಸಿದಾಗ, ಫಜರ್ ಅಲಿ ಬಾಗಿಲನ್ನು ಒಡೆದು, ಅವಳನ್ನು ವಿವಸ್ತ್ರಗೊಳಿಸಿ ಅತ್ಯಾಚಾರ ನಡೆಸಿದ್ದಾನೆ ಎಂದು ಸಂತ್ರಸ್ತ ಮಹಿಳೆ ದೂರು ನೀಡಿದ್ದಾಳೆ.

   ಮಹಿಳೆಯ ಕುಟುಂಬ ಆರೋಪಿ ಬಳಿ 35 ಸಾವಿರ ರೂ. ಸಾಲ ಪಡೆದುಕೊಂಡಿತ್ತು. ಸಾಲ ಮರುಪಾವತಿ ದಿನಾಂಕ ಮುಗಿದಿದ್ದರಿಂದ ಫಜರ್ ಆಕೆಯ ಕುಟುಂಬಕ್ಕೆ ಕಿರುಕುಳ ನೀಡಲು ಶುರು ಮಾಡಿಕೊಂಡಿದ್ದ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆಕೆಯ ಮನೆಗೆ ನುಗ್ಗಿ ಈ ಕೃತ್ಯ ಎಸಗಿದ್ದಾನೆ. ಸಹಾಯಕ್ಕಾಗಿ ಮಹಿಳೆ ಕೂಗಿಕೊಂಡಿದ್ದಾಳೆ. ಕೂಗು ಕೇಳಿ ಹತ್ತಿರದ ಸ್ಥಳೀಯರು ಸ್ಥಳಕ್ಕೆ ಧಾವಿಸಿದರು. ಸ್ಥಳೀಯರು ಆತನಿಗೆ ಥಳಿಸಿದ್ದಾರೆ. ನಂತರ ಆತ ಅಲ್ಲಿಂದ ತಪ್ಪಿಸಿಕೊಂಡು ಹೋಗಿದ್ದಾನೆ. ವರದಿಯ ಪ್ರಕಾರ, ಸ್ಥಳೀಯರಿಂದ ಥಳಿತಕ್ಕೊಳಗಾದ ನಂತರ ಕುಮಿಲ್ಲಾದ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ. ನಂತರ ಆತನನ್ನು ಢಾಕಾದಲ್ಲಿ ಬಂಧಿಸಲಾಯಿತು.

    ಸ್ಥಳೀಯರ ಪ್ರಕಾರ, ಫಜಾರ್ ಆ ಪ್ರದೇಶದಲ್ಲಿ ಮಾದಕ ದ್ರವ್ಯ ಮತ್ತು ಜೂಜಾಟದ ವ್ಯವಹಾರಗಳನ್ನು ನಡೆಸುತ್ತಿದ್ದನು . ಯಾವುದೇ ಅಧಿಕೃತ ಹುದ್ದೆಯನ್ನು ಹೊಂದಿಲ್ಲದಿದ್ದರೂ ಖಲೀದಾ ಜಿಯಾ ನೇತೃತ್ವದ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ಸದಸ್ಯನೆಂದು ಹೇಳಿಕೊಂಡಿದ್ದನು. ಈ ಕೃತ್ಯವನ್ನು ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಇತರ ನಾಲ್ವರನ್ನು ಸಹ ಬಂಧಿಸಲಾಗಿದೆ.

   ತಮಿಳುನಾಡಿನ ಯುವಕನೊಬ್ಬ 80 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಆರೋಪಿಯನ್ನು 23 ವರ್ಷದ ಸುಂದರವೇಲು ಎಂದು ಗುರುತಿಸಲಾಗಿದೆ. ವಾಕಿಂಗ್‌ ಮಾಡುತ್ತಿದ್ದ ವೃದ್ಧೆಯ ಮೇಲೇೆರಗಿ ಈತ ಅತ್ಯಾಚಾರ ಎಸಗಿದ್ದ. ಈ ವೇಳೆ ಆತ ಮದ್ಯ ಸೇವಿಸಿದ್ದ ಎಂದು ಮೂಲಗಳು ತಿಳಿಸಿವೆ. ʼʼಆರೋಪಿ ಸುಂದರವೇಲು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದೇವೆ. ನಮ್ಮ ಬಳಿ ಸೂಕ್ತ ಸಾಕ್ಷಿಗಳಿದ್ದು, ಇದರ ಆಧಾರದಲ್ಲಿ ತನಿಖೆ ನಡೆಸುತ್ತಿದ್ದೇವೆ. ಸದ್ಯ ಸಂತ್ರಸ್ತೆ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆʼʼ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಂಧಿಸಲು ತೆರಳಿದ ಪೊಲೀಸರ ಮೇಲೆ ಆರೋಪಿ ಚಾಕುವಿನಿಂದ ದಾಳಿ ನಡೆಸಲು ಮುಂದಾಗಿದ್ದ. ಈ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.

Recent Articles

spot_img

Related Stories

Share via
Copy link