ಕೊನೆ ಹಂತದ ಚುನಾವಣೆ : ಸುದ್ದಿಗಾರನ ಮೇಲೆ ಹಲ್ಲೆ….!

ಕೋಲ್ಕತಾ: 

   ಹಾಲಿ ಲೋಕಸಭಾ ಚುನಾವಣೆಯ 7ನೇ ಮತ್ತು ಅಂತಿಮ ಹಂತದ ಮತದಾನ ಚಾಲ್ತಿಯಲ್ಲಿರುವಂತೆಯೇ ಇತ್ತ ಬಂಗಾಳದಲ್ಲಿ ಚುನಾವಣಾ ಹಿಂಸಾಚಾರ ವರದಿಯಾಗಿದೆ. 

   ಹಾಲಿ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಇಂದು ನಡೆಯುತ್ತಿದ್ದು, 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶ ಒಳಗೊಂಡು ಒಟ್ಟು 57 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.

    ಪಂಜಾಬ್‌ನ ಎಲ್ಲಾ 13 ಲೋಕಸಭಾ ಕ್ಷೇತ್ರಗಳು, ಉತ್ತರಪ್ರದೇಶದ 13 ಕ್ಷೇತ್ರಗಳು, ಪಶ್ಚಿಮ ಬಂಗಾಳ 09, ಬಿಹಾರ 08, ಒಡಿಶಾ06, ಹಿಮಾಚಲ ಪ್ರದೇಶ04, ಜಾರ್ಖಂಡ್03, ಕೇಂದ್ರಾಡಳಿ ಪ್ರದೇಶದ ಚಂಡೀಗಢ 01 ಕ್ಷೇತ್ರಕ್ಕೆ ಮತದಾನ ನಡೆಯುತ್ತಿದೆ. 5.24 ಕೋಟಿ ಪುರುಷ, 4.82 ಮಹಿಳೆಯರು ಸೇರಿ 10.06 ಕೋಟಿ ಮತದಾರರು ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ಇದಲ್ಲದೆ ಒಡಿಶಾ ವಿಧಾನಸಭೆ ಚುನಾವಣೆಯ ಬಾಕಿಯಿರುವ 42 ಕ್ಷೇತ್ರಗಳು ಮತ್ತು ಹಿಮಾಚಲದ ಪ್ರದೇಶ 06 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ.

   ಪಶ್ಚಿಮ ಬಂಗಾಳದ ಒಂಬತ್ತು ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಆದರೆ ಜಾದವ್‌ಪುರ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಭಾಂಗಾರ್‌ನ ಸತುಲಿಯಾ ಪ್ರದೇಶದಲ್ಲಿ ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್‌ಎಫ್) ಮತ್ತು ಸಿಪಿಐ(ಎಂ) ಬೆಂಬಲಿಗರ ನಡುವೆ ಘರ್ಷಣೆಗಳು ಉಂಟಾಗಿ ಹಿಂಸಾಚಾರ ನಡೆದಿದೆ. ಈ ಘರ್ಷಣೆ ವೇಳೆ ಹಲವರಿಗೆ ಗಾಯಗಳಾಗಿದ್ದು ಪರಿಸ್ಥಿತಿ ಉಲ್ಬಣಗೊಂಡಿದೆ. ಕಿಡಿಗೇಡಿಗಳು ಬಾಂಬ್​ ದಾಳಿ ನಡೆಸಿ ಮತಗಟ್ಟೆಗೆ ನುಗ್ಗಿ, ಎಲೆಕ್ಟ್ರಾನಿಕ್ ಮತಯಂತ್ರವನ್ನು (ಇವಿಎಂ) ಕೊಳಕ್ಕೆ ಎಸೆದಿದ್ದಾರೆ.

   ಅಂತೆಯೇ ಪಶ್ಚಿಮ ಬಂಗಾಳದ ಜಯನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕ್ಯಾನಿಂಗ್‌ನಲ್ಲಿ ಟಿಎಂಸಿ-ಬಿಜೆಪಿ ಘರ್ಷಣೆಯಲ್ಲಿ ಎಎನ್‌ಐ ಸುದ್ದಿಸಂಸ್ಥೆಯ ವರದಿಗಾರನ ಮೇಲೆ ಹಲ್ಲೆಯಾಗಿದ್ದು, ವರದಿಗಾರ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಪ್ರದೇಶದಲ್ಲಿ ಎರಡು ಪಕ್ಷಗಳ ನಡುವೆ ಕಲ್ಲು ತೂರಾಟ ನಡೆದಿದ್ದು, ಈ ವೇಳೆ ವರದಿಗಾರ ಬಂಟಿ ಮುಖರ್ಜಿ ತೀವ್ರವಾಗಿ ಗಾಯಗೊಂಡರು. ಅವರ ತಲೆಗೆ ಗಂಭೀರ ಪೆಟ್ಟಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಕೋಲ್ಕತ್ತಾದ ಮೆಡಿಕಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap