ಬೆಂಗಳೂರು:
ವಿಧಾನಸೌಧದಲ್ಲೇ ಕತ್ತು ಕುಯ್ದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ವಿಧಾನಸೌಧದ 3ನೇ ಮಹಡಿಯ 332ರ ಕೊಠಡಿ ಸಂಖ್ಯೆಯ ಶೌಚಾಲಯದಲ್ಲಿ ವ್ಯಕ್ತಿ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ, ಈ ವ್ಯಕ್ತಿಯನ್ನು ರೇವಣ್ಣ ಕುಮಾರ್ ಎಂದು ಗುರುತಿಸಲಾಗಿದೆ. ಆದರೆ ಆತ್ಮಹತ್ಯೆ ಯತ್ನಕ್ಕೆ ಕಾರಣ ಏನು ಎಂದು ತಿಳಿದು ಬಂದಿಲ್ಲ.
ತೀವ್ರ ರಕ್ತಸ್ರಾವದಿಂದ ಅಸ್ವಸ್ಥಗೊಂಡಿದ್ದ ಚಿಕ್ಕಬಳ್ಳಾಪುರ ಮೂಲದ ಆರ್.ರೇವಣ್ಣ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/06/vidhan-soudha-suicide.gif)