ದೇವರಾಯನದುರ್ಗದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ : ಆಗಸ್ಟ್ 22ರಂದು ಶ್ರಾವಣ ಮಾಸದ ವಿಶೇಷ ಪೂಜಾ ಕಾರ್ಯಕ್ರಮ

ಕೊರಟಗೆರೆ 

   ಇತಿಹಾಸ ಪ್ರಸಿದ್ಧ ತುಮಕೂರು ದೇವರಾಯನದುರ್ಗದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಆಗಸ್ಟ್ 22ರ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಶ್ರಾವಣ ಮಾಸದ ವಿಶೇಷ ಪೂಜಾ ಕಾರ್ಯಕ್ರಮ ಏರ್ಪಡಿಸಲಾಗಿದ್ದು ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವತಾ ಕಾರ್ಯವನ್ನ ಯಶಸ್ವಿಗೊಳಿಸಬೇಕು ಎಂದು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರು ಕಾಂಗ್ರೆಸ್ ಮುಖಂಡರಾದ ಪಿ ಎನ್ ಕೃಷ್ಣಮೂರ್ತಿ ಕುಟುಂಬ ವರ್ಗದಿಂದ ಏರ್ಪಡಿಸಲಾಗಿದ್ದು ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪೂಜಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

    ಶ್ರಾವಣ ಮಾಸದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಲಕ್ಷ್ಮಿ ನರಸಿಂಹ ಸ್ವಾಮಿಗೆ ಅಷ್ಟಕಲಾಭಿಷೇಕ, ಹೋಮ , ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಕಲ್ಯಾಣೋತ್ಸವ ಪೂಜಾ ಕಾರ್ಯಕ್ರಮದ ನಂತರ ಮಧ್ಯಾಹ್ನ ಪ್ರಸಾದ ವಿನಿಯೋಗ ಏರ್ಪಡಿಸಲಾಗಿದ್ದು ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವತಾ ಕಾರ್ಯದಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗುವುದಲ್ಲದೆ ದೇವತಾ ಕಾರ್ಯ ಯಶಸ್ವಿಗೊಳಿಸಬೇಕು ಎಂದು ಶ್ರೀಮತಿ ಚಂದ್ರಕಲಾ ಪಿ ಎನ್ ಕೃಷ್ಣಮೂರ್ತಿ ಹಾಗೂ ಕುಟುಂಬ ವರ್ಗ ಮನವಿ ಮಾಡಿಕೊಂಡಿದ್ದಾರೆ.

Recent Articles

spot_img

Related Stories

Share via
Copy link