ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ

ನವದೆಹಲಿ:

   ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡಲಿದೆ.

   2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಮೊದಲ ಸೆಮಿಫೈನಲ್ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿದೆ. ಈ ಮಹತ್ವದ ಪಂದ್ಯ ದುಬೈನ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಎರಡೂ ತಂಡಗಳು ಸೆಮಿಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿರುವುದು ಇದೇ ಮೊದಲು. ಗುಂಪು ಹಂತದಲ್ಲಿ ಎರಡೂ ತಂಡಗಳು ಉತ್ತಮ ಪ್ರದರ್ಶನ ನೀಡಿದ್ದು, ಟೀಂ ಇಂಡಿಯಾ ಆಡಿದ ಮೂರು ಪಂದ್ಯಗಳಲ್ಲೂ ಜಯ ಸಾಧಿಸಿದೆ. ಇತ್ತ, ಆಸ್ಟ್ರೇಲಿಯಾ 1 ಪಂದ್ಯವನ್ನು ಗೆದ್ದಿದ್ದರೆ 2 ಪಂದ್ಯ ಮಳೆಯಿಂದ ರದ್ದಾಗಿತ್ತು. ಈ ಎರಡೂ ತಂಡಗಳು ತಮ್ಮ ಮೂರನೇ ಪ್ರಶಸ್ತಿಯನ್ನು ಎದುರು ನೋಡುತ್ತಿವೆ.

Recent Articles

spot_img

Related Stories

Share via
Copy link