ಆಯನೂರು ಮಂಜುನಾಥ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ

ಬೆಂಗಳೂರು

    ಬಿಜೆಪಿ ಹಿರಿಯ ಮುಖಂಡ ಆಯನೂರು ಮಂಜುನಾಥ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ .ಆಯನೂರು ಮಂಜುನಾಥ್ ಅವರು ಚಿತ್ರದುರ್ಗದಲ್ಲಿ ಇಂದು ಮಧ್ಯಾಹ್ನ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು, ಅಲ್ಲಿಯೇ ಅವರಿಗೆ ಕುಮಾರಸ್ವಾಮಿ ಬಿ ಫಾರಂ ನೀಡಿದರು. ಶಿವಮೊಗ್ಗ ನಗರದಿಂದ ಆಯನೂರು ಮಂಜುನಾಥ್ ಅವರು ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದು ಆ ಮೂಲಕ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಖಚಿತವಾಗಿದೆ.

    ಶಿವಮೊಗ್ಗ ನಗರದಿಂದ ಸ್ಪರ್ಧಿಸಲು ತಮಗೆ ಟಿಕೆಟ್ ನೀಡಬೇಕು ಎಂದು ಆಯನೂರು ಮಂಜುನಾಥ್ ಅವರು ಬಿಜೆಪಿ ವರಿಷ್ಟರನ್ನು ಕೋರಿದ್ದರಲ್ಲದೆ,ಕೆ.ಎಸ್.ಈಶ್ವರಪ್ಪ ಅವರಿಗೆ ಯಾವ ಕಾರಣಕ್ಕೂ ಟಿಕೆಟ್ ನೀಡಬಾರದು ಎಂದು ಪಟ್ಟು ಹಿಡಿದಿದ್ದರು.

    ಈ ಮಧ್ಯೆ ಈಶ್ವರಪ್ಪನವರಿಗೆ ಬಿಜೆಪಿ ಟಿಕೆಟ್ ನೀಡದಿದ್ದರೂ ಕೊನೆಯ ಘಳಿಗೆಯಲ್ಲಿ ಅವರ ಕುಟುಂಬ ಸದಸ್ಯರೊಬ್ಬರಿಗೆ ಟಿಕೆಟ್ ನೀಡಲಿದೆ ಎಂಬ ಮಾತು ಕೇಳಿ ಬರುತ್ತಿದ್ದು ಇದರಿಂದ ಆಯನೂರು ಮಂಜುನಾಥ್ ಬೇಸತ್ತಿದ್ದರು.

    ಹೀಗಾಗಿ ಅವರು ಜೆಡಿಎಸ್ ಸೇರಲು ಧಿಡೀರ್ ನಿರ್ಧಾರ ಕೈಗೊಂಡರಲ್ಲದೆ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚಿಸಿದರಲ್ಲದೆ,ಚುನಾವಣೆಯಲ್ಲಿ ಸ್ಪರ್ಧಿಸಲು ಬಿ ಫಾರಂ ಪಡೆದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap