ಈಶ್ವರಪ್ಪ ಮೆದುಳಿಗೂ, ನಾಲಿಗೆ ಗೂ ಲಿಂಕ್ ಇಲ್ಲವೆಂಬುದು ಸಾಬೀತು: ಆಯನೂರು ಮಂಜುನಾಥ್

ಶಿವಮೊಗ್ಗ

ಕೆ.ಎಸ್.ಈಶ್ವರಪ್ಪ ಅವರ ನಾಲಿಗೆಗೂ, ಮೆದುಳಿಗೂ ಲಿಂಕ್ ಇಲ್ಲ ಎಂಬುವುದನ್ನು ಅವರು ಮತ್ತೆ ಮತ್ತೆ ಸಾಬೀತುಪಡಿಸುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಲೇವಡಿ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪನವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ಅವರ ಮಗ ಯತೀಂದ್ರ ಮತಾಂತರಗೊಂಡು ಪಾಕಿಸ್ತಾನಕ್ಕೆ ಹೋಗಲಿ ಎಂದು ಹೇಳಿದ್ದಾರೆ.

ಈಶ್ವರಪ್ಪ ಅವರ ನಾಲಿಗೆಗೂ, ಮೆದುಳಿಗೆ ಲಿಂಕ್ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಅದು ಮತ್ತೆ ಮತ್ತೆ ನಿಜವಾಗುತ್ತಿದೆ. ಅವರ ಜೊತೆ ಮಾತಿನ ಸ್ಪರ್ಧೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹರಿಹಾಯ್ದರು.

ಬೇಕಾದಷ್ಟು ವಿಷಯಗಳಿವೆ:

ಬಿಜೆಪಿ ನಾಯಕರು ನನ್ನನ್ನು ಬಂಧಿಸಿ ಎಂದು ಪೊಲೀಸ್ ಠಾಣೆಗೆ ಬರುತ್ತಿದ್ದಾರೆ. ಈಶ್ವರಪ್ಪ ಸೇರಿದಂತೆ ಬಿಜೆಪಿ ನಾಯಕರನ್ನು ಬಂಧಿಸಲು ಬೇರೆ ಬೇಕಾದಷ್ಟು ವಿಷಯಗಳಿವೆ. ಹಲವು ವಿಷಯದಲ್ಲಿ ನನ್ನ ಮೇಲೆ ಕೇಸು ಹಾಕಬೇಡಿ ಎಂದು ಪೊಲೀಸರಿಗೆ ವಿನಂತಿಸಿದ್ದಿದೆ. ಇಷ್ಟು ವರ್ಷದ ಅವರ ಹೋರಾಟದಲ್ಲಿ ಅವರ ವಿರುದ್ಧ ಒಂದಾದರೂ ಕೇಸು ಬಿದ್ದಿವೆಯೇ ಎಂದು ಲೇವಡಿ ಮಾಡಿದರು.

ಬಿ.ಎಸ್. ಯಡಿಯೂರಪ್ಪ ಅವರನ್ನು ಜೈಲಿಗೆ ಕಳಿಸಿದ್ದು ಯಾರು ಎಂದು ಗೊತ್ತಿದೆ. ಅವರು ಜೈಲಿನಲ್ಲಿದ್ದಾಗ ಸೌಜನ್ಯಕ್ಕಾಗಿಯಾದರೂ ಇದೇ ಬಿಜೆಪಿ ನಾಯಕರು ಯಾರೂ ಹೋಗಲಿಲ್ಲ. ನಾನು, ರೇಣುಕಾಚಾರ್ಯ ಹೋಗಿ ಬಂದಿದ್ದೆವು.

ಅವರು ಜೈಲಿನಲ್ಲಿದ್ದದ್ದು, ಈಗಿರುವ ಅನೇಕ ಬಿಜೆಪಿಗರಿಗೆ ಸಂತಸ ತಂದಿತ್ತು. ಇದೇ ಈಶ್ವರಪ್ಪನವರು ನಾನಾಗಿದ್ದರೆ ಪ್ರಾಣ ಕಳೆದುಕೊಳ್ಳುತ್ತಿದ್ದೆ ಎಂದಿದ್ದರು. ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಸಿದ್ದರಾಮಯ್ಯನವರ ತಲೆಕಡಿಯಬೇಕು ಎಂದಿದ್ದರು. ಈಗ ಸದನದ ಒಳಗೆಯೇ ಇದ್ದಾರೆ.

ಅವರ ಹತ್ತಿರವೇ ಸಿದ್ದರಾಮಯ್ಯ ಇರುತ್ತಾರೆ, ಕಡಿಯಲಿ. ಅವರದೇ ಪಕ್ಷದ ಬಸವನಗೌಡ ಪಾಟೀಲ್ ಮಾಡಿರುವ ₹40 ಸಾವಿರ ಕೋಟಿ ಕೋವಿಡ್ ಹಗರಣದ ಬಗ್ಗೆ ಬಿಜೆಪಿ ನಾಯಕರು ಉತ್ತರಿಸಲಿ ಎಂದು ಆಯನೂರು ಮಂಜುನಾಥ್‌ ಕುಟುಕಿದರು.

Recent Articles

spot_img

Related Stories

Share via
Copy link
Powered by Social Snap