ಚಿತ್ರದುರ್ಗ
ಚಿತ್ರದುರ್ಗ ನಗರದ ಮೃತ ರೇಣುಕಾ ಸ್ವಾಮಿ ಕುಟುಂಬಕ್ಕೆ ಭೇಟಿ ನೀಡಿ, ಮೃತನ ಪೋಷಕರಿಗೆ ಸಾಂತ್ವನ ಹೇಳಿ ನಂತರ ಅವರು ಮಾತನಾಡಿದರು. ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ, ಮೃತ ಪತ್ನಿಗೆ ಉದ್ಯೋಗ ಕೊಡಬೇಕು ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.
ಈ ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಿದ್ದರೂ ಅಂತಹವರಿಗೆ ಶಿಕ್ಷೆಯಾಗಲಿ. ಇಲ್ಲಿ ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ಮಾಡ್ರನ್ ಜಗತ್ತಲ್ಲಿ ಟೆಕ್ನಾಲಜಿ ಹೆಚ್ಚಾದ ಮೇಲೆ ಸೈಬರ್ ಕ್ರೈಮ್ ಜಾಸ್ತಿಯಾಗಿದೆ. ಮೃತ ರೇಣುಕಾಸ್ವಾಮಿ ಮೇಲೆ ಸಣ್ಣ ದೂರು ಕೊಟ್ಟಿದ್ರೆ ವಿಚಾರಣೆ ನಡೆಸಬಹುದಿತ್ತು. ಆದರೆ ಕೊಲೆ ಮಾಡುವ ಹಂತಕ್ಕೆ ಇಳಿದಿರುವುದು ಸರಿಯಲ್ಲ. ನಟ ದರ್ಶನ್ ಪೊಲೀಸರಿಗೆ ಕರೆ ಮಾಡಿ ಹೇಳಿದ್ರೆ ಎಲ್ಲಾ ಸಮಸ್ಯೆ ಬಗೆಹರಿಯುತ್ತಿತ್ತು ಎಂದು ತಿಳಿಸಿದರು. ಇನ್ನು ಈ ಪ್ರಕರಣದ ಬಗ್ಗೆ ತನಿಖೆ ಮಾಡಲು ಪೊಲೀಸರು ಇದ್ದಾರೆ. ನಾವು ಯಾವುದು ಸುಳ್ಳು, ಯಾವುದು ನಿಜ ಅಂತಾ ಹೇಳುವುದಕ್ಕೆ ಆಗುವುದಿಲ್ಲ. ಆದರೆ, ದರ್ಶನ್ ಒಳ್ಳೆಯ ವ್ಯಕ್ತಿ, ಒಳ್ಳೆಯ ನಟ ಆಗಿದ್ದ. ಈಗ ಅವರ ಮೇಲೆ ಕೊಲೆ ಆರೋಪ ಬಂದಿದೆ. ಕೋರ್ಟ್‌ನಲ್ಲಿ ಕೇಸ್ ಎದುರಿಸುತ್ತಿದ್ದಾರೆ. ತನಿಖೆ ಆದ್ಮೇಲೆ ಸತ್ಯ ಏನೆಂದು ಗೊತ್ತಾಗುತ್ತದೆ ಎಂದರು.
ಇನ್ನು ಚಿತ್ರರಂಗದಿಂದ ನಟ ದರ್ಶನ್ ಅವರನ್ನ ಬ್ಯಾನ್ ಮಾಡುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಚಿವರು, ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡುವ ವಿಚಾರ ಚೆಂಬರ್‌ಗೆ ಬಿಟ್ಟ ವಿಚಾರ. ಫಿಲ್ಮ್ ಚೇಂಬರ್ ಅದರ ಬಗ್ಗೆ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.
“ದರ್ಶನ್ ಪ್ರಕರಣದ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು ಅವರು, ನಾನು ನೋಡಿದ ಹಾಗೆ ದರ್ಶನ್ ಅವರ ತಂದೆ ಶೂಟಿಂಗ್ ಸೆಟ್‌ನಲ್ಲಿ ಕೆಲವೊಮ್ಮೆ ತುಂಬಾ ಕೋಪಗೊಳ್ಳುತ್ತಿದ್ದರು. ಅದು ಕೆಲವೊತ್ತಷ್ಟೇ. ಆಮೇಲೆ ಎಲ್ಲರ ಜೊತೆಗೂ ಬೆರೆಯುವ ಸ್ವಭಾವ ಅವರದ್ದಾಗಿತ್ತು. ಸಿನಿಮಾದಲ್ಲಿ ಖಲನಾಯಕನಾಗಿದ್ದರೆ, ನಿಜಜೀವನದಲ್ಲಿ ಹಿರೋ ಆಗಿದ್ದರು,” ಎಂದರು.
