ಪ್ರಜ್ವಲ್‌ ಪ್ರಕರಣದ ವಿಶೇಷ ಅಭಿಯೋಜಕರಾಗಿ ಬಿ ಎನ್‌ ಜಗದೀಶ್‌ ನೇಮಕ ….!

ಬೆಂಗಳೂರು:

    ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಲು ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರನ್ನು ವಿಶೇಷ ಅಭಿಯೋಜಕರನ್ನಾಗಿ ನೇಮಕ ಮಾಡಲಾಗಿದೆ.

    ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್‌ ರೇವಣ್ಣ ಮತ್ತು ಅವರ ತಂದೆ ಎಚ್‌ ಡಿ ರೇವಣ್ಣ ವಿರುದ್ಧ ಹೊಳೆನರಸೀಪುರದ ಟೌನ್‌ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಪಣ ದಾಖಲಾಗಿದೆ.

   ಇದರಂತೆ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಪರವಾಗಿ ವಾದ ಮಂಡಿಸಲು ಹೆಚ್ಚುವರಿ ರಾಜ್ಯ ಸರ್ಕಾರಿ ಅಭಿಯೋಜಕರಾಗಿರುವ ಬಿ ಎನ್‌ ಜಗದೀಶ್‌ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ಮುಂದಿನ ಆದೇಶದವರೆಗೆ ನೇಮಕ ಮಾಡಿ ಮಂಗಳವಾರ ಆದೇಶಿಸಲಾಗಿದೆ. ದಂಡ ಪ್ರಕ್ರಿಯಾ ಸಂಹಿತೆ 1975ರ ಸೆಕ್ಷನ್‌ 24ರ ಉಪ ಸೆಕ್ಷನ್‌ 8ರ ಅಡಿಯಲ್ಲಿ ಜಗದೀಶ್‌ ಅವರ ನೇಮಕ ಮಾಡಲಾಗಿದೆ.

    ಸಂತ್ರಸ್ತ ಮಹಿಳೆ ನೀಡಿದ ದೂರಿನ ಅನ್ವಯ ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್‌ ಠಾಣೆಯಲ್ಲಿ ಪ್ರಜ್ವಲ್‌ ರೇವಣ್ಣ ಮತ್ತು ಅವರ ತಂದೆ ಮಾಜಿ ಸಚಿವ ಎಚ್‌ ಡಿ ರೇವಣ್ಣ ವಿರುದ್ಧ ಏಪ್ರಿಲ್‌ 28ರಂದು ಭಾರತೀಯ ದಂಡ ಸಂಹಿತೆ ಸೆಕ್ಷನ್‌ಗಳಾದ 354(ಎ), 354(ಡಿ), 506, 509 ಅಡಿ ಎಫ್‌ಐಆರ್‌ ದಾಖಲಾಗಿದೆ. ಇದರ ತನಿಖೆಯನ್ನು ಹಿರಿಯ ಐಪಿಎಸ್‌ ಅಧಿಕಾರಿ ಬಿ ಕೆ ಸಿಂಗ್‌ ನೇತೃತ್ವದ ವಿಶೇಷ ತನಿಖಾ ತಂಡ ಆರಂಭಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap