ಬೆಂಗಳೂರು :
ಗೌಡರ ಮನೆಯ ಸೊಸೆ ರೇವತಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದು, ನಟ ನಿಖಿಲ್ ಕುಮಾರಸ್ವಾಮಿ ಅವರು ಅಪ್ಪನಾದ ಖುಷಿಯಲ್ಲಿದ್ದಾರೆ.
ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ.
— H D Kumaraswamy (@hd_kumaraswamy) September 24, 2021
ಇನ್ನು ನಿಖಿಲ್ ಅವರಿಗೆ ಗಂಡು ಮಗುವಾದ ವಿಷಯವನ್ನು ಎಚ್.ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡುವ ಮೂಲಕ ಹಂಚಿಕೊಂಡಿದ್ದರು. ಅಲ್ಲದೆ ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಬರೆದುಕೊಂಡಿದ್ದಾರೆ.
ಆಸ್ಪತ್ರೆಯಲ್ಲಿ ಮಗನನ್ನು ಕೈಯಲ್ಲಿ ಎತ್ತಿ ಹಿಡಿದ ನಿಖಿಲ್ ಅವರ ಮುಖದಲ್ಲಿ ಅಪ್ಪನಾಗಿರುವ ಖುಷಿ ಕಾಣುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
