ಬಿಜೆಪಿಗೆ ಬಿ.ಎನ್ ಬಚ್ಚೇಗೌಡ ಗುಡ್ ಬೈ…..!

ಬೆಂಗಳೂರು : 

    ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಾಲಿ ಸಂಸದ ಬಿ.ಎನ್.ಬಚ್ಚೇಗೌಡ ರಾಜೀನಾಮೆ ಸಲ್ಲಿಸಲಿದ್ದೇನೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಹಿಂದೆಯೇ ಚುನಾವಣಾ ನಿವೃತ್ತಿ ಘೋಷಣೆ ಮಾಡಿದ್ದ ಬಿ. ಎನ್. ಬಚ್ಚೆಗೌಡ, ಪಕ್ಷದ ಸಂಘಟನೆ ಹಾಗೂ ಚಟುವಟಿಕೆಗಳಿಂದ ಸಂಪೂರ್ಣ ದೂರ ಉಳಿದಿದ್ದರು.

    ಚಿಕ್ಕಬಳ್ಳಾಪುರ ಸಂಸದ ಬಿ.ಎನ್.ಬಚ್ಚೇಗೌಡ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು ರಾಜ್ಯಾಧ್ಯಕ್ಷ ವಿಜಯೇಂದ್ರಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ರಾಜಕೀಯದಿಂದ ದೂರ ಇರಲು ನಿರ್ಧಾರ ಮಾಡಿದ್ದರೂ ಸಕ್ರಿಯ ರಾಜಕಾರಣದಲ್ಲಿಯೇ ಬಚ್ಚೇಗೌಡ ಇರಲಿದ್ದಾರೆ.

   ಆದರೆ ಚುನಾವಣೆಯಲ್ಲಿ ಯಾರ ಪರವೂ ಕೆಲಸ ಮಾಡದಿರಲು ನಿರ್ಧಾರ ಮಾಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬಚ್ಚೇಗೌಡರು ಒಂದು ಬಿಜೆಪಿ ನೆಲೆ ತಂದುಕೊಟ್ಟವರು. ಕಳೆದ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್‌ನ ವೀರಪ್ಪ ಮೊಯ್ಲಿ ಅವರನ್ನು ಹೆಚ್ಚು ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು.

    ಬಿ.ಎನ್.ಬಚ್ಚೇಗೌಡ  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಬೆಂಡಗಾನಹಳ್ಳಿ ಗ್ರಾಮದವರು. 82 ವರ್ಷದ ಬಿ.ಎನ್.ಬಚ್ಚೇಗೌಡ ಪ್ರಸ್ತುತ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿಯ ಸಂಸದರಾಗಿದ್ದಾರೆ.

     ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಬೆಂಡಗಾನಹಳ್ಳಿ ಗ್ರಾಮದವರು. 82 ವರ್ಷದ ಬಿ.ಎನ್. ಬಚ್ಚೇಗೌಡ ಪ್ರಸ್ತುತ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದರಾಗಿದ್ದಾರೆ. ಬಿ.ಎನ್. ಬಚ್ಚೇಗೌಡರು ಜನತಾ ಪಕ್ಷದಿಂದ ಗುರುತಿಸಿಕೊಂಡು ತಮ್ಮ ರಾಜಕೀಯವನ್ನು ಆರಂಭಿಸಿದವರು.

    1978 ರಲ್ಲಿ ಜನತಾ ಪಕ್ಷದ ಮೂಲಕ ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗುವುದರ ಮೂಲಕ 1985, 1994, 1999 ಹಾಗೂ 2008 ರಲ್ಲಿ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ಶಾಸಕರಾಗಿ ಒಟ್ಟು 5 ಬಾರಿ ಆಯ್ಕೆಯಾದರು. 1989, 2004, 2013 ರಲ್ಲಿ ಹೊಸಕೋಟೆ ವಿಧಾನಸಭಾ ಕ್ಷೇತ್ರ ಸೋಲನ್ನು ಅನುಭವಿಸಿದ್ದರು. ನಂತರ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದರು.

    2014 ರಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿ.ಎನ್.ಬಚ್ಚೇಗೌಡ, ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಡಾ. ಎಂ. ವೀರಪ್ಪ ಮೊಯ್ಲಿ ವಿರುದ್ಧ ಸೋತಿದ್ದರು. 2019ರಲ್ಲಿ ನಡೆದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯಾಗಿ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಕಾಂಗ್ರೆಸ್‍ನ ಡಾ. ಎಂ. ವೀರಪ್ಪ ಮೊಯ್ಲಿ ವಿರುದ್ದ ಗೆಲುವು ಸಾಧಿಸುವುದರ ಮೂಲಕ ಹಾಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದು.

   ಇತ್ತೀಚಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆಸುವುದಿಲ್ಲ ಎಂದು ಚುನಾವಣಾ ನಿವೃತ್ತಿಯನ್ನು ಘೋಷಣೆ ಮಾಡಿದ್ದರು. ಸಂಸದ ಬಿ. ಎನ್. ಬಚ್ಛೇಗೌಡರ ಮಗ ಶರತ್​ ಬಚ್ಚೇಗೌಡ ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಶಾಸಕ ಶರತ್ ಬಚ್ಚೇಗೌಡರ ಮಾವ ಕೆ.ಎಚ್. ಪುಟ್ಟಸ್ವಾಮಿಗೌಡ ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕರಾಗಿದ್ದು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap