ಬೆಂಗಳೂರು:
ವಿದ್ಯಾರ್ಥಿಗಳಿಗೆ ‘ಆನ್ ಲೈನ್’ ಕ್ಲಾಸ್.?
ಕೋವಿಡ್ 3ನೇ ಅಲೆಯ ಮುನ್ಸೂಚನೆಯಿಂದಾಗಿ ಪ್ರಕರಣಗಳ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಇದೇ ಕಾರಣದಿಂದಾಗಿ ಮಕ್ಕಳನ್ನು ಶಾಲೆಗಳಿಗೆ ಕಳುಹಿಸೋದಕ್ಕೆ ಪೋಷಕರು ಹಿಂದೇಟು ಹಾಕ್ತಾ ಇದ್ದಾರೆ.
ಕೊರೋನಾ 3ನೇ ಅಲೆಯ ( Corona 3rd Wave ) ಭೀತಿಯಿಂದಾಗಿ ಮತ್ತೆ ರಾಜ್ಯದಲ್ಲಿ ಶಾಲಾ-ಕಾಲೇಜು ಬಂದ್ ಆಗಲಿವೆ ಎನ್ನಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಆನ್ ಲೈನ್ ಕ್ಲಾಸ್ ( Online Class ) ಶುರುವಾಗಲಿದೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಸುಳಿವು ನೀಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಈಗಾಗಲೇ ಕೊರೋನಾ ಹೆಚ್ಚಳವಾದಂತ ಕೆಲ ರಾಜ್ಯಗಳಲ್ಲಿ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲಾಗಿದೆ.
ಶೈಕ್ಷಣಿಕ ಚಟುವಟಿಕೆಯನ್ನು ಆನ್ ಲೈನ್ ಮೂಲಕ ಮುಂದುವರೆಸಲಾಗಿದೆ. ರಾಜ್ಯದಲ್ಲಿ ಕೊರೋನಾ ಹೆಚ್ಚಳದ ನಡುವೆಯೂ ಶಾಲಾ-ಕಾಲೇಜುಗಳ ನಡೆಯುತ್ತಿವೆ. ಕೊರೋನಾ ನಿಯಂತ್ರಣಕ್ಕೆ ಎಲ್ಲಾ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ.
ಮಕ್ಕಳ ಶೈಕ್ಷಣಿಕ ಚಟುವಟಿಕೆ ಸಂಬಂಧ ಯಾವೆಲ್ಲಾ ಕ್ರಮ ಕೈಗೊಳ್ಳಬೇಕು ಎನ್ನುವ ಬಗ್ಗೆ ಇಂದಿನ ಸಿಎಂ ನೇತೃತ್ವದ ತಾಂತ್ರಿಕ ಸಮಿತಿಯ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಮತ್ತೊಂದೆಡೆ ಸಿಎಂ ಬಸವರಾಜ ಬೊಮ್ಮಾಯಿಯವರು ಕೂಡ ಇಂದು ಸಂಜೆ ತಜ್ಞರ ಸಭೆಯನ್ನು ನಡೆಸುತ್ತಿದ್ದಾರೆ. ಈ ಸಭೆಯಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳದಿಂದಾಗಿ ಶಾಲಾ-ಕಾಲೇಜು ಬಂದ್ ಮಾಡೋ ನಿರ್ಧಾರದ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ಮತ್ತೆ ಶಾಲಾ ಕಾಲೇಜು ಬಂದ್ ಆಗಲಿವೆ. ಮಕ್ಕಳಿಗೆ ಶೈಕ್ಷಣಿಕ ವ್ಯಾಸಂಗ ಆನ್ ಲೈನ್ ತರಗತಿ ಮೂಲಕ ಮುಂದುವರೆಯಲಿದೆ ಎನ್ನಲಾಗುತ್ತಿದೆ. ಆ ಬಗ್ಗೆ ಇಂದು ಸಂಜೆ ಸ್ಪಷ್ಟ ನಿರ್ಧಾರ ಹೊರ ಬೀಳಲಿದೆ.
ಇದರ ನಡುವೆ ರಾಜ್ಯದಲ್ಲಿ ಕೊರೋನಾ ಹೆಚ್ಚಳದ ಕಾರಣದಿಂದಾಗಿ ಅನೇಕ ಪೋಷಕರು ತಮ್ಮ ಮಕ್ಕಳನ್ನು ಶಾಲೆಗಳಿಗೆ ಕಳುಹಿಸೋದಕ್ಕೆ ಹಿಂದೇಟು ಹಾಕುತ್ತಿದ್ದಾರೆ.
ಶಾಲಾ-ಕಾಲೇಜುಗಳನ್ನು ಬಂದ್ ಮಾಡಿ, ಆನ್ ಲೈನ್ ತರಗತಿಗಳಲ್ಲಿ ಶೈಕ್ಷಣಿಕ ಚಟುವಟಿಕೆ ಮುಂದುವರೆಸುವಂತೆ ಒತ್ತಾಯಿಸುತ್ತಿದ್ದಾರೆ.
ಅದರಲ್ಲೂ 1 ರಿಂದ 7ನೇ ತರಗತಿ ಮಕ್ಕಳನ್ನು ಶಾಲೆಗೆ ಕಳಿಸೋದಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಇದೇ ಕಾರಣದಿಂದಾಗಿ ಬಹುತೇಕ ಶಾಲೆಗಳಲ್ಲಿ ಮಕ್ಕಳ ಹಾತರಾತಿ ಸಂಖ್ಯೆ ಕೂಡ ಕಡಿಮೆ ಆಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
