ಬೀಗರ ಔತಣಕೂಟದಲ್ಲಿ ಎಡವಟ್ಟು : ನೂರಾರು ಜನ ಅಸ್ವಸ್ಥ…!

ಮೈಸೂರು

   ಮದುವೆ ಮನೆಯ ಬೀಗರ ಔತಣಕೂಟದಲ್ಲಿ ಊಟ ಸೇವಿಸಿದ ನೂರಾರು ಜನರು ಏಕಾಏಕಿ ಅಸ್ವಸ್ಥಗೊಂಡಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ.

   ಏಪ್ರಿಲ್‌ 25 ಗುರುವಾರ ಮಧ್ಯಾಹ್ನ ಕೊಪ್ಪ ಗ್ರಾಮದಲ್ಲಿ ನಡೆದ ಮದುವೆಯೊಂದರಲ್ಲಿ ನೂರಾರು ಜನರು ಭಾಗಿಯಾಗಿದ್ದು, ಹಲವಾರು ಮಂದಿ ಊಟ ಜನರು ಸೇವಿಸಿದ್ದಾರೆ. ಊಟ ಸೇವಿಸಿದ ಬಳಿಕ ಸಂಜೆಯ ವೇಳೆಗೆ ಹಲವರಲ್ಲಿ ವಾಂತಿ ಕಾಣಿಸಿಕೊಂಡಿದೆ. ಬೀಗರ ಔತಣಕೂಟದಲ್ಲಿ ಊಟ ಮಾಡಿದ ಪರಿಣಾಮ ಸುಮಾರು 200ಕ್ಕೂ ಹೆಚ್ಚು ಜನರು ಆಸ್ಪತ್ರೆ ಸೇರಿದ್ದಾರೆ.

   ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು 150 ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಇನ್ನು ಕೆಲವರು ಕುಶಾಲನಗರ ಖಾಸಗಿ ಆಸ್ಪತ್ರೆಯಲ್ಲೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ ಪಿರಿಯಾಪಟ್ಟಣ ಆಸ್ಪತ್ರೆಯಲ್ಲೂ ಹಲವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಈ ಬೀಗರ ಔತಣಕೂಟದಲ್ಲಿ ಸಚಿವ ಕೆ. ವೆಂಕಟೇಶ್ ಕೂಡ ಭಾಗಿಯಾಗಿದ್ದರು. ಆದರೆ ಅವರು ಮಾಂಸ ಆಹಾರ ಬದಲಿಗೆ ಸಸ್ಯಹಾರಿ ಆಹಾರ ಸೇವಿಸಿದ್ದು, ಇದರಿಂದ ಅವರು ಆರೋಗ್ಯವಾಗಿದ್ದಾರೆ.

   ಈ ಬೀಗರ ಔತಣಕೂಟದಲ್ಲಿ ಮಾಂಸಹಾರ ಸೇವನೆ ಮಾಡಿದವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಕೊಡಗು ಆರೋಗ್ಯಾಧಿಕಾರಿ ಕುಶಾಲನಗರ ಆಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಕುಶಾಲನಗರದ ಕ್ಲಿನಿಕ್‌ಗಳು ಫುಲ್‌ ಆಗಿದ್ದು, ಕೆಲವರು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ತೆರಳಿದ್ದಾರೆ. ಇನ್ನು ಆಸ್ಪತ್ರೆಗೆ ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಭೇಟಿ‌ ನೀಡಿ ಜನರ ಆರೋಗ್ಯದ ಬಗ್ಗೆ ವೈದ್ಯರ ಬಳಿ ಮಾಹಿತಿ ಪಡೆದಿದ್ದಾರೆ.

 

Recent Articles

spot_img

Related Stories

Share via
Copy link
Powered by Social Snap