ಪಶ್ಚಿಮ ಬಂಗಾಳ
ಪಶ್ಚಿಮ ಬಂಗಾಳದ ಪ್ರೌಢಶಾಲೆಯ ಹೊರಗೆ ಬ್ಯಾಗ್ ಸ್ಫೋಟಗೊಂಡಿದ್ದು, ಓರ್ವ ಸಾವನ್ನಪ್ಪಿದ್ದಾರೆ. ಆ ಪ್ರದೇಶದಲ್ಲಿ ಭೀತಿ ಉಂಟಾಗಿದ್ದು, ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ಮೃತ ವ್ಯಕ್ತಿಯನ್ನು ಸಚ್ಚಿದಾನಂದ ಮಿಶ್ರಾ ಎಂದು ಗುರುತಿಸಲಾಗಿದ್ದು, ಅವರು ಉತ್ತರ ಪ್ರದೇಶದ ನಿವಾಸಿಯಾಗಿದ್ದಾರೆ.
ಸ್ಫೋಟದ ನಂತರ, ಹಿರಿಯ ಪೊಲೀಸ್ ಅಧಿಕಾರಿಗಳು, ಬಾಂಬ್ ನಿಷ್ಕ್ರಿಯ ದಳ ಮತ್ತು ವಿಧಿವಿಜ್ಞಾನ ತಜ್ಞರು ಸ್ಥಳಕ್ಕೆ ಧಾವಿಸಿ, ಸಾರ್ವಜನಿಕ ಪ್ರವೇಶವನ್ನು ತಡೆಯಲು ಪ್ರದೇಶವನ್ನು ಸುತ್ತುವರೆದಿದ್ದರು. ಸ್ಥಳದಿಂದ ಒಂದು ಬ್ಯಾಗ್, ಮೊಬೈಲ್ ಚಾರ್ಜರ್ ಮತ್ತು ಬಟ್ಟೆಗಳು ಸೇರಿದಂತೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ರಾಷ್ಟ್ರೀಯ ತನಿಖಾ ಸಂಸ್ಥೆ ಕೂಡ ಈ ಪ್ರಕರಣದ ಬಗ್ಗೆ ಆಸಕ್ತಿ ವಹಿಸಿದ್ದು, ಅಧಿಕಾರಿಗಳು ಸ್ಫೋಟ ನಡೆದ ಸ್ಥಳ ಮತ್ತು ಬರಾಸತ್ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಸ್ಫೋಟದ ನಿಖರ ಸ್ವರೂಪವನ್ನು ಸ್ಥಾಪಿಸಲು ಅಧಿಕಾರಿಗಳು ವಿಧಿವಿಜ್ಞಾನ ವರದಿಗಾಗಿ ಕಾಯುತ್ತಿದ್ದಾರೆ.
ಇಂಡಿಯಾ ಟುಡೇಯೊಂದಿಗೆ ಮಾತನಾಡಿದ ಬರಾಸತ್‌ನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅತಿಶ್ ಬಿಸ್ವಾಸ್, ಆ ವ್ಯಕ್ತಿಯನ್ನು ಉತ್ತರ ಪ್ರದೇಶದ ನಿವಾಸಿ ಸಚ್ಚಿದಾನಂದ ಮಿಶ್ರಾ ಎಂದು ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ. ಸ್ಫೋಟದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ, ಫೋರೆನ್ಸಿಕ್ ತಂಡವು ಘಟನಾ ಸ್ಥಳಕ್ಕೆ ಭೇಟಿ ನೀಡಿದೆ. ವರದಿ ಬಂದ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.








