ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲು ಪ್ರಸಾದ್ ಯಾದವ್, ತೇಜಸ್ವಿಯಾದವ್ ಗೆ ಜಾಮೀನು

ದೆಹಲಿ:

    ರೈಲ್ವೆ ಇಲಾಖೆಯಲ್ಲಿನ ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಹಣದ ಅಕ್ರಮ ವರ್ಗಾವಣೆ ಸಂಬಂಧ ಆರ್‌ಜೆಡಿ ನಾಯಕರಾದ ಲಾಲು ಪ್ರಸಾದ್ ಯಾದವ್ ಮತ್ತು ಪುತ್ರರಾದ ತೇಜಸ್ವಿ ಯಾದವ್ ಮತ್ತು ತೇಜ್ ಪ್ರತಾಪ್ ಯಾದವ್ ಅವರಿಗೆ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

   ತಲಾ 1 ಲಕ್ಷ ರು. ಮೊತ್ತದ ಬಾಂಡ್‌ ನೀಡುವಂತೆ ಸೂಚಿಸಿ ಜಾಮೀನು ನೀಡಿರುವ ನ್ಯಾಯಾಲಯ, ವಿಚಾರಣೆಯನ್ನು ಇದೇ ತಿಂಗಳ 25ಕ್ಕೆ ಮುಂದೂಡಿದೆ. ಈ ಹಿಂದೆ ನ್ಯಾಯಾಲಯವು ಅವರಿಗೆ ನೀಡಿದ್ದ ಸಮನ್ಸ್‌ಗೆ ಅನುಗುಣವಾಗಿ ಲಾಲೂ ಪ್ರಸಾದ್ ಮತ್ತು ಅವರ ಪುತ್ರರು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಆರೋಪಿಗಳ ವಿರುದ್ಧದ ಪೂರಕ ಆರೋಪ ಪಟ್ಟಿಯನ್ನು ಪರಿಗಣಿಸಿದ ಬಳಿಕ ನ್ಯಾಯಾಧೀಶರು ಸಮನ್ಸ್ ಜಾರಿ ಮಾಡಿದ್ದರು.

   ಅಂತಿಮ ವರದಿಯನ್ನು ಆಗಸ್ಟ್ 6 ರಂದು ಜಾರಿ ನಿರ್ದೇಶನಾಲಯ (ಇಡಿ) ನ್ಯಾಯಾಲಯಕ್ಕೆ ಸಲ್ಲಿಸಿದೆ. ಸಿಬಿಐ ದಾಖಲಿಸಿದ ಎಫ್‌ಐಆರ್ ಆಧರಿಸಿ ಇಡಿ ತನ್ನ ಪ್ರಕರಣವನ್ನು ದಾಖಲಿಸಿದೆ. ಉದ್ಯೋಗಕ್ಕಾಗಿ ಭೂ ಹಗರಣದಲ್ಲಿ ಲಾಲು ಪ್ರಸಾದ್ ಯಾದವ್ , ತೇಜಸ್ವಿ ಯಾದವ್ ಅವರನ್ನು ಆರೋಪಿಗಳೆಂದು ಹೆಸರಿಸಲಾಗಿದೆ. ರೈಲ್ವೇ ಒದಗಿಸಿದ ಉದ್ಯೋಗಗಳಿಗೆ ಬದಲಾಗಿ ಲಾಲು ಪ್ರಸಾದ್ ಯಾದವ್ ಅವರು ಹಲವಾರು ತುಂಡು ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ಇಡಿ ತನಿಖೆ ಹೇಳಿತ್ತು.

  ಲಾಲು ಪ್ರಸಾದ್ ಯಾದವ್ ಅವರು 2004 ಮತ್ತು 2009 ರ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದಾಗ ಅವರ ಕುಟುಂಬಕ್ಕೆ ಉಡುಗೊರೆಯಾಗಿ ನೀಡಿದ ಅಥವಾ ಮಾರಾಟ ಮಾಡಿದ ಜಮೀನುಗಳಿಗೆ ಪ್ರತಿಯಾಗಿ ರೈಲ್ವೆಯಲ್ಲಿ ನೇಮಕಾತಿ ಮಾಡಲಾಗಿದೆ. ಜಾಹೀರಾತು ನೀಡದೆ ಅಥವಾ ಸಾರ್ವಜನಿಕರ ಗಮನಕ್ಕೂ ತರದೆ ತಮ್ಮ ನೆಚ್ಚಿನ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಾಗಿತ್ತು.

 

Recent Articles

spot_img

Related Stories

Share via
Copy link
Powered by Social Snap