ಮುಂಬೈ:
ಮಹಾರಾಷ್ಟ್ರ ಕಾಂಗ್ರೆಸ್ ಸಂಸದ ಬಾಲು ಧನೋರ್ಕರ್ ಇಂದು ಮುಂಜಾನೆ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ. ಮೃತರು ಪತ್ನಿ ಪ್ರತಿಭಾ ಧನೋರ್ಕರ್ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಮೂತ್ರಪಿಂಡದ ಕಲ್ಲು ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಕಳೆದ ವಾರ ನಾಗ್ಪುರ ಮೂಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ನವದೆಹಲಿಗೆ ಸ್ಥಳಾಂತರಿಸಲಾಗಿತ್ತು ಎಂದು ಕಾಂಗ್ರೆಸ್ ನಾಯಕ ಬಾಳಾಸಾಹೇಬ್ ಥೋರಟ್ ಹೇಳಿದ್ದಾರೆ. ಧರ್ನೋಕರ್ ಅವರ ನಿಧನಕ್ಕೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸಂತಾಪ ಸೂಚಿಸಿದ್ದಾರೆ.
ಚಂದ್ರಾಪುರ ಜಿಲ್ಲೆಯಲ್ಲಿ ಬಾಳಾಸಾಹೇಬ್ ಠಾಕ್ರೆ ನೇತೃತ್ವದ ಶಿವಸೇನೆಯಲ್ಲಿ ತಮ್ಮ ರಾಜಕೀಯ ವೃತ್ತಿಜೀವನ ಪ್ರಾರಂಭಿಸಿದ ಧನೋಕರ್ 2014 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಗೆದಿದ್ದರು. ನಂತರ ಕಾಂಗ್ರೆಸ್ ಪಕ್ಷ ಸೇರಿ ಅದೇ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ