ತುಮಕೂರು
ಹೆರಿಗೆ ನಂತರ ಬಾಣಂತಿ ಜೊತೆಗೆ ಬೆಳ್ಳಾವಿ ಹೋಬಳಿ ಮಲ್ಲೇನಹಳ್ಳಿ ಊರಾಚೆ ಜಮೀನಿನ ಗುಡಿಸಲಿನಲ್ಲಿ ಇಡಲಾಗಿದ್ದ ನವಜಾತ ಶಿಶು ಅನಾರೋಗ್ಯದಿಂದ ಸಾವನ್ನಪ್ಪಿದ ಹಿನ್ನಲೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ನೂರುನ್ನೀಸ ಇಂದು ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿ ಗ್ರಾಮಸ್ಥರು ಹಾಗೂ ಸ್ಥಳಿಯ ಸರ್ಕಾರಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು
ಮೃತ ಮಗುವಿನ ಪೋಷಕರ ಆಹವಾಲು ಸ್ವೀಕರಿಸಿದ ನ್ಯಾಯಾಧೀಶರು, ಸಾರ್ವಜನಿಕರಿಂದ ಮಾಹಿತಿ ಕಲೆ ಹಾಕಿ, ಮಗು ಮೃತಪಟ್ಟ ನಂತರವೂ ಮೂರು ದಿನಗಳಿಂದ ಸುರಿಯುತ್ತಿರುವ ಜಡಿ ಮಳೆಯನ್ನು ಲೆಕ್ಕಿಸದೆ ತಾಯಿಯನ್ನು ಹಟ್ಟಿಯ ಒಳಗಡೆ ವಾಸ ಮಾಡಲು ಬೀಡದೆ ಊರಾಚೆಯ ಗುಡಿಸಲಿನಲ್ಲಿಯೇ ಒಂಟಿಯಾಗಿ ಇರಿಸಲಾಗಿರುವ ಮಾಹಿತಿ ಪಡೆದ ಅವರು ಗ್ರಾಮಸ್ಥರಿಗೆ ಕಾನೂನುಗಳ ತಿಳುವಳಿಕೆ ನೀಡಿ, ಗುಡಿಸಲನ್ನು ಕೆಡವಿಸಿ, ಬಾಣಂತಿಯನ್ನು ಹಟ್ಟಿಗೆ ಕರೆತರಿಸಿದರು, ಸ್ಥಳೀಯ ವೈದ್ಯರಿಂದ ಚಿಕಿತ್ಸೆ ಕೊಡಿಸಿದ ನ್ಯಾಯಾಧೀಶರು, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದರು, ಈ ಹಿಂದೆ ಸ್ಥಳೀಯ ಸರ್ಕಾರಿ ಅಧಿಕಾರಿಗಳು ಗುಡಿಸಲಿಗೆ ತೆರಳಿ ಬಾಣಂತಿ ಹಾಗೂ ಮಗುವನ್ನು ಮನೆಗೆ ಸೇರಿಸುವ ಪ್ರಯತ್ನ ನಡೆಸಿದರೂ ಪ್ರಯೋಜನವಾಗಿರಲಿಲ್ಲ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ