ಬಾಣಂತಿ ಸಾವು: ಸಮಿತಿ ವರದಿ ಬಂದ ನಂತರ ಸೂಕ್ತ ಕ್ರಮ

ಚಾಮರಾಜನಗರ:

   ಬಳ್ಳಾರಿ ಆಸ್ಪತ್ರೆಗೆ ಇಂದು ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿ ಬಾಣಂತಿ ಸಾವಿನ ಕುರಿತು ಪರಿಶೀಲನೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಚಾಮರಾಜನಗರದ ನರಿಪುರ ಗ್ರಾಮದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

   ಬಳ್ಳಾರಿ ಆಸ್ಪತ್ರೆಯ ಮೇಲೆ ಇಂದು ಲೋಕಾಯುಕ್ತ ದಾಳಿಯಾಗಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ನಾಲ್ಕು ಬಾಣಂತಿಯರು ಮರಣ ಹೊಂದಿದಾಗ ಸಭೆ ಕರೆಯಲಾಗಿತ್ತು. ಐದನೇ ಬಾಣಂತಿ ಮೃತಪಟ್ಟಿರುವ ಬಗ್ಗೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ಚರ್ಚೆ ನಡೆದಿದೆ. ಕಳಪೆ ಗುಣಮಟ್ಟದ ಔಷಧ ಸರಬರಾಜು ಮಾಡುತ್ತಿರುವ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ ಹಾಗೂ ಔಷಧ ನಿಯಂತ್ರಕರನ್ನು ಅಮಾನತು ಮಾಡಲಾಗಿದೆ ಎಂದರು.

Recent Articles

spot_img

Related Stories

Share via
Copy link