ನಾಮಪತ್ರ ಹಿಂಪಡೆಯಲು ಕೊನೆ ದಿನ :ಪಕ್ಷಗಳಿಂದ ಬಂಡಾಯ ಶಮನಕ್ಕೆ ಕಸರತ್ತು

ಬೆಂಗಳೂರು:

       3632 ಮಂದಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. 502 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕರಿಸಲಾಗಿದೆ. 3130 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿವೆ.

     ಬಿಜೆಪಿ ಎಲ್ಲಾ ಇನ್ನೂ 224 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. 75 ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. 68 ಮಂದಿ ಲಿಂಗಾಯಿತರಿಗೆ ಬಿಜೆಪಿ ಟಿಕೆಟ್ ನೀಡಲಾಗಿದ್ದು, 134 ಪದವೀಧರರು, 37 ಸ್ನಾತಕೋತ್ತರ ಪದವೀಧರರು ಸೇರಿದ್ದಾರೆ.

    ಕಾಂಗ್ರೆಸ್ 223 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. 53 ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. 53 ಒಕ್ಕಲಿಗರಿಗೆ, 51 ಮಂದಿ ಲಿಂಗಾಯಿತರಿಗೆ, 14 ಮುಸ್ಲಿಮರಿಗೆ ಟಿಕೆಟ್ ನೀಡಲಾಗಿದೆ.ಜೆಡಿಎಸ್ 211 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಕೆಲವೆಡೆ ಬಂಡಾಯ ಅಭ್ಯರ್ಥಿಗಳ ಮನವೊಲಿಕೆ ಯಶಸ್ವಿಯಾಗಿದ್ದು, ನಾಮಪತ್ರ ವಾಪಸ್ ಪಡೆಯಲು ಒಪ್ಪಿಕೊಂಡಿದ್ದಾರೆ.

    ಇಂದು ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ. ನಂತರ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಸ್ಪಷ್ಟ ಚಿತ್ರಣ ಸಿಗಲಿದೆ. ಇದರೊಂದಿಗೆ ಪ್ರಚಾರದ ಕಣ ಮತ್ತಷ್ಟು ರಂಗೇರಲಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap