ಬೆಂಗಳೂರು : ಮತ್ತೊಂದು ಹೋಟೆಲ್‌ ಗೆ ಬಾಂಬ್‌ ಬೆದರಿಕೆ

ಬೆಂಗಳೂರು

     ನಗರದ ಮತ್ತೊಂದು ಹೋಟೆಲ್‌ಗೆ ಬಾಂಬ್ ಬೆದರಿಕೆ ಬಂದಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಹೋಟೆಲ್ ಒಟೆರಾ ಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ. ಈ ಮೂಲಕ ಒಂದೇ ದಿನ ಎರಡು ನಗರದ ಎರಡು ಪ್ರತಿಷ್ಠಿತ ಹೋಟೆಲ್​ಗೆ ಬಾಂಬ್ ಬೆದರಿಕೆ ಹಾಕಿದ್ದಾರೆ. ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಭೇಟಿ ನೀಡಿದ್ದು, ಸಂಪೂರ್ಣ ಹೋಟೆಲ್​ನ್ನು ತಪಾಸಣೆ ಮಾಡಲಾಗುತ್ತಿದೆ.

    ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ರಾಜಕಾರಣಿಗಳು, ಕ್ರಿಕೆಟರ್​ಗಳು ಆಗಾಗ ವಾಸ್ತವ್ಯ ಹೂಡುವ ನಗರದ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ​ಹೋಟೆಲ್​ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು. ಕೂಡಲೇ ಎಚ್ಚೆತ್ತ ಹೋಟೆಲ್​ ಸಿಬ್ಬಂದಿ, ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೆಲಹೊತ್ತಲ್ಲೇ ಸ್ಥಳಕ್ಕೆ ಬಂದ ಪೊಲೀಸರು, ಬಾಂಬ್ ಸ್ಕ್ವಾಡ್​​ ಪರಿಶೀಲನೆ ನಡೆಸಿದ್ದರು. ಬಳಿಕ ಇದೊಂದು ಹುಸಿ ಬಾಂಬ್​ ಬೆದರಿಕೆ ಎಂಬುದು ಗೊತ್ತಾಗಿದೆ. ಇದಾದ ಕೆಲವೇ ಗಂಟೆಗಳಲ್ಲಿ ಹೋಟೆಲ್ ಒಟೆರಾ ಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ.

Recent Articles

spot_img

Related Stories

Share via
Copy link
Powered by Social Snap