ಬೆಂಗಳೂರು : ಜನನಿಬಿಡ ಪ್ರದೇಶದಲ್ಲೇ ಮಹಿಳೆ ಮೇಲೆ ಅತ್ಯಾಚಾರ, ದರೋಡೆ

ಬೆಂಗಳೂರು:

   ಬೆಂಗಳೂರಿನಲ್ಲಿ  ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಜನನಿಬಿಡ ಪ್ರದೇಶದಲ್ಲೇ ಮಹಿಳೆಯೊಬ್ಬರ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರ  ಎಸಗಿದ್ದಾರೆ. ಬಸ್‌ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಇಬ್ಬರು ಕಾಮುಕರು ಎರಗಿದ್ದಲ್ಲದೆ, ಆಕೆಯನ್ನು ದರೋಡೆ  ಕೂಡ ಮಾಡಿದ್ದಾರೆ.

   ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೆ.ಆರ್. ಮಾರ್ಕೆಟ್ ನಲ್ಲಿ ಬಸ್ ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಇಬ್ಬರು ಅಪರಿಚಿತ ವ್ಯಕ್ತಿಗಳು ಬಸ್ ತೋರಿಸುವುದಾಗಿ ಕರೆದೊಯ್ದು ಅತ್ಯಾಚಾರ ಎಸಗಿ ಮೊಬೈಲ್, ನಗದು ಹಾಗೂ ಚಿನ್ನಾಭರಣ ದೋಚಿದ್ದಾರೆ ಎಂದು ಕೇಂದ್ರ ವಿಭಾಗದ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.

   ಭಾನುವಾರ ರಾತ್ರಿ 11.30ಕ್ಕೆ ಕೆ.ಆರ್.ಮಾರ್ಕೆಟ್ ಬಳಿಯ ಗೋಡೌನ್ ಸ್ಟ್ರೀಟ್ ನಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನೆ ಸಂಬಂಧ ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Recent Articles

spot_img

Related Stories

Share via
Copy link