ಕುಡಿದ ಮತ್ತಿನಲ್ಲಿ ಜಾಲಿರೈಡ್​ ; ಅಪಘಾತದಲ್ಲಿ 3 ಯುವಕರ ದುರಂತ ಸಾವು..!

ಬೆಂಗಳೂರು :

      ಕುಡಿದ ಮತ್ತಿನಲ್ಲಿ ಅತಿವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದ ಮೂವರು ಯುವಕರು  ಭೀಕರ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ  ಹೊಸಕೋಟೆಯ ಟೋಲ್ ಗೇಟ್ ಬಳಿ ನಡೆದಿದೆ.

      ಮೃತ ಯುವಕರನ್ನು ರಾಜೇಶ್, ಲವನಿತ್ ಹಾಗೂ ಹರೀಶ್ ಎಂದು ಗುರುತಿಸಲಾಗಿದೆ. ಕಂಠಪೂರ್ತಿ ಕುಡಿದಿದ್ದ ಮೂವರು  ಯುವಕರು  ಅತಿವೇಗವಾಗಿ ಬೈಕ್ ಚಲಾಯಿಸಿಕೊಂಡು ಹೋಗಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ತೀವ್ರ ರಕ್ತ ಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

      ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link