ಬೆಂಗಳೂರು:
ಆನೇಕಲ್ ತಾಲೂಕಿನ ಕಿತ್ತಗಾನಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎರಡು ಅಂತಸ್ತಿನ ಕಟ್ಟಡದಲ್ಲಿ ಬ್ಲಾಸ್ಟ್ ಆಗಿದೆ.ಓರ್ವನಿಗೆ ಗಾಯ, ಮತ್ತೊಬ್ಬನಿಗೆ ತಲೆ-ಕೈಕಾಲುಗಳಿಗೆ ಪೆಟ್ಟು ಬಿದ್ದಿದೆ. ಸ್ಫೋಟಕ್ಕೆ ಕಾರಣ ಏನು ಅನ್ನೋದು ಇನ್ನು ತಿಳಿದು ಬಂದಿಲ್ಲ.ಕೇರಳ ಮೂಲದ ಸುನೀಲ್ ಜೋಸೆಫ್, ವಿಷ್ಣು ಜಯರಾಜ್ ಎಂಬವರು ಗಾಯಗೊಂಡಿದ್ದು, ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಫೋಟದ ತೀವ್ರತೆಗೆ ಮನೆ ಗೋಡೆಗಳು, ಕಿಟಕಿ, ಬಾಗಿಲು ಛಿದ್ರವಾಗಿವೆ. ಅಕ್ಕಪಕ್ಕದ ನಾಲ್ಕೈದು ಮನೆಗಳು, ಕೆಲವು ವಾಹನಗಳಿಗೂ ಹಾನಿಯಾಗಿದೆ. ಸೂರ್ಯಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.