ಬೆಂಗಳೂರು ಬಂದ್‌ : ಅಕ್ಷರಶಃ ಸ್ತಬ್ದವಾದ ಬೆಂಗಳೂರು

ಬೆಂಗಳೂರು: 

    ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಇಂದು ಬೆಂಗಳೂರು ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಳಗ್ಗೆ ಆರು ಗಂಟೆಯಿಂದಲೂ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ವ್ಯಾಪಾರ ವಹಿವಾಟು ಬಹುತೇಕ ಸ್ಥಗಿತಗೊಂಡಿದೆ.

     ಶಾಪಿಂಗ್ ಮಾಲ್ ಗಳು ಕ್ಲೋಸ್ ಆಗಿದ್ದು, ಅವುಗಳ ಮುಂದೆ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.ವಾಹನಗಳ ದಟ್ಟಣೆಯಿಂದ ತುಂಬಿರುತ್ತಿದ್ದ ರಸ್ತೆಗಳು ಬಣಗುಡುತ್ತಿವೆ, ಸದಾ ಗಿಜಿಗುಡುತ್ತಿದ್ದ ಏರಿಯಾಗಳು ಖಾಲಿ, ಖಾಲಿ ಹೊಡೆಯುತ್ತಿವೆ. 

     ಬಿಎಂಟಿಸಿ ಹಾಗೂ ಕೆಎಸ್ ಆರ್ ಟಿಸಿ ಬಸ್ ಗಳ ಸಂಚಾರವಿದ್ದರೂ ಪ್ರಯಾಣಿಕರಿಲ್ಲದೆ ಜನದಟ್ಟಣೆ ಪ್ರದೇಶಗಳಾದ ಮೆಜೆಸ್ಟಿಕ್, ಕೆ ಆರ್ ಮಾರ್ಕೆಟ್ ಮತ್ತಿತರ ಕಡೆಗಳಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ತೀರಾ ವಿರಳವಾಗಿದೆ. ಬಂದ್ ನಿಂದಾಗಿ ರಾಜ್ಯದಲ್ಲಿ ಜನದಟ್ಟಣೆಯ ಬಸ್ ನಿಲ್ದಾಣಗಳಲ್ಲಿ ಒಂದಾದ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಕಾಣುತ್ತಿಲ್ಲ ಎಂದು ಕಂಡಕ್ಟರೊಬ್ಬರು ಹೇಳಿದರು. 

     ಆಟೋ ಚಾಲಕ ನಾಸೀರ್ ಖಾನ್ ಮಾತನಾಡಿ,ಬಂದ್ ಗೆ ನಮ್ಮ ಬೆಂಬಲವಿದೆ. ಕಾವೇರಿ ವಿಚಾರ ಬಂದಾಗ ನಮ್ಮ ನಿಲುವು ಸ್ಪಷ್ಪವಾಗಿದೆ. ಕರ್ನಾಟಕ ಯಾರಿಗೂ ನೀರು ಒದಗಿಸುವುದಿಲ್ಲ, ಆಟೋಗಳು ಇಂದು ಕಾರ್ಯ ನಿರ್ವಹಿಸಲ್ಲ, ನಾವು ಬಂದ್ ಗೆ ಬೆಂಬಲ ನೀಡುತ್ತಿದ್ದೇವೆ ಎಂದರು. 

     ಖಾಸಗಿ ಸಾರಿಗೆ ಒಕ್ಕೂಟ ಬೆಂಗಳೂರು ಬಂದ್ ಗೆ ಬೆಂಬಲ ಸೂಚಿಸಿದ್ದು, ಮಕ್ಕಳ ಸುರಕ್ಷತೆ ದೃಷ್ಟಿಯಂದ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸುವ ಮೂಲಕ ಬಿಗಿ ಭದ್ರತೆ ಒದಗಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap