ಬೆಂಗಳೂರು :
ಪಹಲ್ಗಾಮ್ ಉಗ್ರರ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಂಡಿದ್ದು, ಕ್ರುದ್ಧಗೊಂಡಿರುವ ಪಾಕಿಸ್ತಾನ ಗಡಿಯಲ್ಲಿ ಶೆಲ್ ಹಾಗೂ ಡ್ರೋನ್ ದಾಳಿ ನಡೆಸುತ್ತಿದೆ. ಭಾರತ ಈ ದಾಳಿಗಳನ್ನು ಯಶಸ್ವಿಯಾಗಿ ತಡೆಯುತ್ತಿದೆ. ಈ ಕುರಿತು ಸುಳ್ಳು ಸುದ್ದಿಗಳನ್ನು ಹರಡಬಾರದು ಎಂದು ಬೆಂಗಳೂರಲ್ಲಿ ಕಮಿಷನರ್ ಬಿ.ದಯಾನಂದ್ ಹೇಳಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಕಾಳಗದ ನಡುವೆ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ. ಅಂತಹವರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕಮಿಷನರ್ ದಯಾನಂದ್, ಭಾರತದ ಗಡಿ ಭಾಗಗಳಲ್ಲಿ ಸಾಕಷ್ಟು ಬೆಳವಣಿಗೆ ಆಗಿವೆ. ಅಧಿಕೃತ ಮಾಧ್ಯಮಗಳ ಮೂಲಕ ಈ ಸುದ್ದಿಗಳನ್ನು ಹಂಚಿಕೊಳ್ಳಲಾಗುತ್ತದೆ. ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಈ ಬಗ್ಗೆ ಸಿಬ್ಬಂದಿಗಳಿಗೆ ಹಲವು ಸೂಚನೆ ನೀಡಲಾಗಿದೆ. ನಗರದ ಎಲ್ಲಾ ಕಡೆಗೆ ಸೂಕ್ತ ಆಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಹೇಳಿಕೆ ನೀಡಿದರು.
