ಪ್ರತಿ ವಾರ್ಡ್‌ ನಲ್ಲೂ ಬೆಂಗಳೂರು ಹಬ್ಬ: ಡಿಕೆಶಿ

ಬೆಂಗಳೂರು:

    ಮುಂದಿನ ವರ್ಷದಿಂದ ನಗರದ ಪ್ರತಿ ವಾರ್ಡ್‌ ಹಾಗೂ ವಿಧಾನಸಭೆ ಕ್ಷೇತ್ರದಲ್ಲಿ ‘ಬೆಂಗಳೂರು ಹಬ್ಬ’ವನ್ನು ಆಯೋಜಿಸಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಗುರುವಾರ ಹೇಳಿದರು.

    ‘ಅನ್‌ಬಾಕ್ಸಿಂಗ್ ಬೆಂಗಳೂರು ಫೌಂಡೇಷನ್’ ವತಿಯಿಂದ ಆಯೋಜಿಸಲಾಗಿರುವ ‘ಬಿ.ಎಲ್‌.ಆರ್‌ ಹ‌ಬ್ಬ’ದ ಅಂಗವಾಗಿ ಚಿಕ್ಕಪೇಟೆಯಲ್ಲಿ ಗುರುವಾರ ನಡೆದ ಕೆಂಪೇಗೌಡರ ಎತ್ತಿನ ಬಂಡಿ ಮೆರವಣಿಗೆಗೆ ಡಿಕೆ.ಶಿವಕುಮಾರ್ ಅವರು ನಿನ್ನೆ ಚಾಲನೆ ನೀಡಿದರು.

    ಬಳಿಕ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡರು ಚಿಕ್ಕಪೇಟೆಯಿಂದ ನಾಲ್ಕು ದಿಕ್ಕಿಗೆ ನಾಲ್ಕು ಜೋಡಿ ಎತ್ತಿನ ಗಾಡಿಯನ್ನು ತೆಗೆದುಕೊಂಡು ಹೋಗಿದ್ದರು. ಎಲ್ಲ ವೃತ್ತಿ, ಎಲ್ಲಾ ಜನಾಂಗ, ಎಲ್ಲಾ ಧರ್ಮದವರನ್ನೂ ಒಟ್ಟಿಗೆ ಸೇರಿಸಿ ಬೆಂಗಳೂರು ನಗರ ಕಟ್ಟಿದರು. ಪ್ರಪಂಚದ ಎಲ್ಲ ಜನ ಬೆಂಗಳೂರಿನ ಮೂಲಕ ಭಾರತವನ್ನು ನೋಡುತ್ತಿದ್ದಾರೆ. ಇದಕ್ಕೆ ಕೆಂಪೇಗೌಡರು ಹಾಕಿಕೊಟ್ಟ ಅಡಿಪಾಯ ಕಾರಣ. ಇದನ್ನು ನಾವು ಉಳಿಸಿಕೊಂಡು, ಬೆಳೆಸಿಕೊಂಡು ಹೋಗಬೇಕು ಎಂದು ಹೇಳಿದರು.

    ಬೆಂಗಳೂರು ಹಬ್ಬವು ಬೆಂಗಳೂರಿನ ಕಲೆ, ಸಂಸ್ಕೃತಿ ಮತ್ತು ಜೀವನವನ್ನು ಕೊಂಡಾಡುವ 11 ದಿನಗಳ ಹಬ್ಬವಾಗಿದ್ದು, ಈ ಉತ್ಸವಕ್ಕೆ ಸರ್ಕಾರ ಎಲ್ಲಾ ಬೆಂಬಲವನ್ನು ನೀಡುತ್ತಿದೆ. ಕಲೆ, ಸಂಸ್ಕೃತಿ, ತಂತ್ರಜ್ಞಾನ ಮುಂತಾದವುಗಳನ್ನು ಕೇಂದ್ರೀಕರಿಸುವ ಈ ಉತ್ಸವವು ನಗರದ ಸುಮಾರು 300 ಸ್ಥಳಗಳಲ್ಲಿ ನಡೆಯಲಿದ್ದು, ಇದನ್ನು ದೊಡ್ಡ ಮಟ್ಟದಲ್ಲಿ ಯಶಸ್ವಿಗೊಳಿಸುವಂತೆ ಸಾರ್ವಜನಿಕರಿಗೆ ಕರೆ ನೀಡುತ್ತಿದ್ದೇನೆಂದು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap