ಬೆಂಗಳೂರಲ್ಲಿ ಅಕ್ಟೋಬರ್ 21ರಿಂದ ಮತ್ತೆ ಮಳೆ, ಯೆಲ್ಲೋ ಅಲರ್ಟ್

ಬೆಂಗಳೂರು :

    ಇಂದು ಬೆಳಗ್ಗೆಯಿಂದಲೇ ಶುಭ್ರ ಆಕಾಶವಿದ್ದು, ಬಿಸಿಲಿದೆ. ಆದರೆ ಅಕ್ಟೋಬರ್ 21ರಿಂದ ಮಳೆ ಶುರುವಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

   ಬೆಳಗಾವಿ, ಅಂಕೋಲಾ, ಕಾರವಾರ, ಗೇರುಸೊಪ್ಪ, ಮುದಗಲ್, ಲೋಕಾಪುರ, ಭದ್ರಾವತಿ, ಕಡೂರು, ಕೋಟ, ಆಲಮಟ್ಟಿ, ಕುಮಟಾ, ಹಳಿಯಾಳ, ಧರ್ಮಸ್ಥಳ, ಮುದ್ದೇಬಿಹಾಳ, ರಾಯಚೂರು, ಸೇಡಂ, ಹೊನ್ನಾವರ, ಕುಷ್ಟಗಿ, ಖಜೂರಿ, ಧಾರವಾಡ, ಸೈದಾಪುರ, ಕುಂದಗೋಳ, ಚಿಕ್ಕೋಡಿ, ಗೋಕಾಕ್​ನಲ್ಲಿ ಮಳೆಯಾಗಿದೆ.
  ಜೇವರ್ಗಿ, ಮಧುಗಿರಿ, ಲಿಂಗನಮಕ್ಕಿ, ಕುಡತಿನಿ, ಹೊಸದುರ್ಗ, ದೊಡ್ಡಬಳ್ಳಾಪುರ, ಚಿಕ್ಕಮಗಳೂರು, ಬೆಳ್ಳೂರು, ತ್ಯಾಗರ್ತಿಯಲ್ಲಿ ಮಳೆಯಾಗಿದೆ. ಕಾರವಾರದಲ್ಲಿ 31.08 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 16.8 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
  ಬೆಂಗಳೂರಿನಲ್ಲಿ ಶುಭ್ರ ಆಕಾಶವಿದೆ, ಎಚ್​ಎಎಲ್​ನಲ್ಲಿ22.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 22.1ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 24.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 24.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
   ಹೊನ್ನಾವರದಲ್ಲಿ 30.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ,ಪಣಂಬೂರಿನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
  ಬೀದರ್​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 27.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
  ಧಾರವಾಡದಲ್ಲಿ 26.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 25.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 25.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Recent Articles

spot_img

Related Stories

Share via
Copy link